ಉತ್ತಮ ನಡವಳಿಕೆ, ಕ್ರಿಯಾತ್ಮಕ ಚಿಂತನೆ ಭವಿಷ್ಯಕ್ಕೆ ಪೂರಕ : ಡಾ. ಸುಬ್ಬರಾಯ

KannadaprabhaNewsNetwork |  
Published : Oct 31, 2025, 01:15 AM IST
ಚಿಕ್ಕಮಗಳೂರಿನ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ಧ ರಾಷ್ಟ್ರ ಮಟ್ಟದ ಹ್ಯಾಕಥಾನ್ - 2025 ಅಭಿನಂದನಾ ಕಾರ್ಯಕ್ರಮದಲ್ಲಿ ಡಾ. ಸಿ.ಕೆ. ಸುಬ್ಬರಾಯ ಅವರು ಮಾತನಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ನಡವಳಿಕೆ, ಕ್ರಿಯಾತ್ಮಕ ಚಿಂತನೆ ಹೊಂದಿದರೆ ಭವಿಷ್ಯದ ಉದ್ಯೋಗಕ್ಕೆ ಪೂರಕವಾಗಲಿದೆ. ಆ ನಿಟ್ಟಿನಲ್ಲಿ ಶ್ರದ್ಧೆ, ಶಿಸ್ತನ್ನು ಬದುಕಿನಲ್ಲಿ ಆಳವಾಗಿ ಮೈಗೂಡಿಸಿ ಕೊಳ್ಳಬೇಕು ಎಂದು ಎಐಟಿ ಕಾಲೇಜು ರಿಜಿಸ್ಟ್ರಾರ್ ಡಾ. ಸಿ.ಕೆ.ಸುಬ್ಬರಾಯ ಹೇಳಿದರು.

- ಎಐಟಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಹ್ಯಾಕಥಾನ್ - 2025 ಅಭಿನಂದನಾ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ನಡವಳಿಕೆ, ಕ್ರಿಯಾತ್ಮಕ ಚಿಂತನೆ ಹೊಂದಿದರೆ ಭವಿಷ್ಯದ ಉದ್ಯೋಗಕ್ಕೆ ಪೂರಕವಾಗಲಿದೆ. ಆ ನಿಟ್ಟಿನಲ್ಲಿ ಶ್ರದ್ಧೆ, ಶಿಸ್ತನ್ನು ಬದುಕಿನಲ್ಲಿ ಆಳವಾಗಿ ಮೈಗೂಡಿಸಿ ಕೊಳ್ಳಬೇಕು ಎಂದು ಎಐಟಿ ಕಾಲೇಜು ರಿಜಿಸ್ಟ್ರಾರ್ ಡಾ. ಸಿ.ಕೆ.ಸುಬ್ಬರಾಯ ಹೇಳಿದರು.ನಗರದ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ಧ ರಾಷ್ಟ್ರಮಟ್ಟದ ಹ್ಯಾಕಥಾನ್ - 2025 ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಇಂದಿನ ಕಾಲಮಾನದಲ್ಲಿ ಹೊಸ ಹೊಸ ಆವಿಷ್ಕಾರ ಕಂಡು ಹಿಡಿಯಲು ವಿದ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳಿವೆ. ಹಾಗಾಗಿ ಆವಿಷ್ಕಾರದ ಮುಖೇನಾ ತಮ್ಮ ಕ್ಷೇತ್ರಗಳಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಬಹುದು. ಇದನ್ನು ಸೂಕ್ತ ರೀತಿಯಲ್ಲಿ ಯುವ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ವಿದ್ಯಾರ್ಥಿ ಹಾಗೂ ವೈಯಕ್ತಿಕ ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಮೆಟ್ಟಿ ನಿಲ್ಲುವಂತ ಸಾಮರ್ಥ್ಯ ಬೆಳೆಸಿಕೊಂಡರೆ ಸೋತವರು ಗೆಲುವಿನ ನಗೆ ಬೀರಬಹುದು. ಅದಕ್ಕಾಗಿ ನಿರಂತರ ಅಭ್ಯಾಸ ಹಾಗೂ ಪರಿಶ್ರಮದ ಅಗತ್ಯವಿದೆ ಎಂದು ಸಲಹೆ ಮಾಡಿದರು.ಪಠ್ಯದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪ್ರತಿಭೆ ಅನಾವರಣಗೊಳಿಸಬೇಕು. ಆಗ ಜಗತ್ತಿನ ಮುಂದೆ ಗಟ್ಟಿಯಾಗಿ ನಿಲ್ಲಲು ಸಾಧ್ಯವಾಗಲಿದೆ. ಬಾಲ್ಯದಿಂದಲೇ ನಿಗಧಿತ ಗುರಿ ತೀರ್ಮಾನಿಸಿದರೆ ವಿದ್ಯಾರ್ಥಿ ಹಾಗೂ ಜೀವನದ ಬಂಡಿಯಲ್ಲಿ ಯಶಸ್ಸು ಸಾಧ್ಯವಾಗಲಿದೆ ಎಂದರು.ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ.ಜಯದೇವ್ ಮಾತನಾಡಿ, ಸತತ 24 ಗಂಟೆಗಳ ಕಾಲ ನಿದ್ರೆ ತ್ಯಜಿಸಿ, ವಿದ್ಯಾರ್ಥಿಗಳು ಕಂಪ್ಯೂಟರ್ ವಿಜ್ಞಾನದಲ್ಲಿ ಸಮಸ್ಯೆ ಪರಿಹರಿಸಲು ಯತ್ನಿಸಲು ಈ ಕಾರ್ಯಕ್ರಮ ಆಯೋಜಿಸಿದ್ದು ಸಕ್ರಿಯವಾಗಿ ವಿದ್ಯಾರ್ಥಿಗಳು ಪಾಲ್ಗೊಂಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪುಷ್ಪ ರವಿಕುಮಾರ್ ಮಾತನಾಡಿ, ರಾಷ್ಟ್ರಮಟ್ಟದ ಹ್ಯಾಕಥಾನ್‌ನಲ್ಲಿ ಎಐಟಿ ಸೇರಿದಂತೆ ಹೊರ ರಾಜ್ಯ ಹಾಗೂ ವಿವಿಧ ಜಿಲ್ಲೆಯಿಂದ ಸುಮಾರು 105 ತಂಡ ಗಳು ಭಾಗವಹಿಸಿವೆ. ಈ ಪೈಕಿ ಅತ್ಯುತ್ತಮ ಸ್ಥಾನ ಪಡೆದ ತಂಡಕ್ಕೆ ಒಂದು ಲಕ್ಷ ರು. ಬಹುಮಾನ ನೀಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಎಲ್ವಿರಾವ್‌ಮೆಂಟ್ ಎಂಜಿನಿಯರ್ ಶಿವಾಲಿ, ಸ್ಟ್ರೀಮ್ಜ್ ಎಐ ಸಂಸ್ಥೆ ಸೀನಿಯರ್ ಮ್ಯಾನೇಜರ್ ಭರತ್, ಎಂಜಿನಿಯರ್ ಕಾರ್ತೀಕ್ ಉಪಸ್ಥಿತರಿದ್ದರು. ಎಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಾಂಕ ಮತ್ತು ದಿಶಾ ಕಾರ್ಯಕ್ರಮ ನಿರೂಪಿಸಿದರು. ಪ್ರೊಫೆಸರ್ ಅನ್ಸರ್‌ಪಾಷ ವಂದಿಸಿದರು. 30 ಕೆಸಿಕೆಎಂ 2ಚಿಕ್ಕಮಗಳೂರಿನ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ಧ ರಾಷ್ಟ್ರಮಟ್ಟದ ಹ್ಯಾಕಥಾನ್ - 2025 ಅಭಿನಂದನಾ ಕಾರ್ಯಕ್ರಮದಲ್ಲಿ ಡಾ. ಸಿ.ಕೆ. ಸುಬ್ಬರಾಯ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ