ದೇಶದ ಅಭಿವೃದ್ಧಿಗೆ ಉತ್ತಮ ಆಡಳಿತ ಮುಖ್ಯ

KannadaprabhaNewsNetwork |  
Published : Jul 03, 2024, 12:23 AM IST
ಸುದ್ದಿಚಿತ್ರ  ೧ ಶಿಡ್ಲಘಟ್ಟ ತಾಲ್ಲೂಕು ಮೇಲೂರು ಗ್ರಾಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಅವರ ಗೃಹಕಚೇರಿಯಲ್ಲಿ ನಡೆದ ಆಶಾಕಿರಣ ಕಾರ್ಯಕ್ರಮದಡಿ ಕನ್ನಡಕಗಳನ್ನು ವಿತರಿಸಿದರು  | Kannada Prabha

ಸಾರಾಂಶ

ನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಒಂದು ದೇಶ ಸುಭದ್ರವಾಗಿ ಅಭಿವೃದ್ದಿಯ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ವ್ಯವಸ್ಥೆ ಇರಬೇಕು. ಜತೆಗೆ ದೇಶದ ಎಲ್ಲರೂ ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಸ್ಥಿತಿಯಲ್ಲಿರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.ತಾಲೂಕಿನ ಮೇಲೂರು ಗ್ರಾಮದಲ್ಲಿ ಶಾಸಕ ಗೃಹಕಚೇರಿಯಲ್ಲಿ ಹಮ್ಮಿಕೊಂಡಿದ್ದ ಆಶಾ ಕಿರಣ ಕಾರ್ಯಕ್ರಮದಡಿ ಕನ್ನಡಗಳನ್ನು ವಿತರಿಸಿ ಅವರು ಮಾತನಾಡಿದರು.ಆರೋಗ್ಯಕ್ಕೆ ಗಮನ ನೀಡಿ

ನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ. ಈ ಯೋಜನೆಗಳನ್ನು ಬಳಸಿಕೊಂಡು ನಮ್ಮ ಆರೋಗ್ಯ ಮಟ್ಟವನ್ನು ಉತ್ತಮಪಡಿಸಿಕೊಳ್ಳಬೇಕೆಂದರು.

ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 2,300 ಮಂದಿಗೆ ಕನ್ನಡಕಗಳನ್ನು ಉಚಿತವಾಗಿ ಆಶಾಕಿರಣ ಯೋಜನೆಯಡಿ ವಿತರಿಸಲಾಯಿತು. ತಾಲ್ಲೂಕಿನ ಉಳಿದ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಇನ್ನುಳಿದ ಎಲ್ಲರಿಗೂ ಕನ್ನಡಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.ವೈದ್ಯ ದಿನಾಚರಣೆ ಶುಭಾಶಯ

ಇಂದು ದೇಶದಲ್ಲಿ ವೈದ್ಯರ ದಿನಾಚರಣೆ ಮಾಡುತ್ತಿದ್ದು ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ , ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಮೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಆರೋಗ್ಯ ಸುರಕ್ಷಣಾಧಿಕಾರಿ ಮುನಿರತ್ನಮ್ಮ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ದೇವರಾಜ್, ನಂದಿನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಾದೂರು ರಘು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮೋದಿ ಕರ್ನಾಟಕಕ್ಕೆ 2 ಕಾರ್ಯಕ್ರಮಗಳಲ್ಲಿ ಭಾಗಿ
ಉಡುಪಿ ಗ್ರಾಪಂ ದೇಶಕ್ಕೇ ನಂ.1! - ಬಡತನರಹಿತ ವಿಭಾಗದಲ್ಲಿ ಮುದ್ರಾಡಿ ಗ್ರಾಪಂಗೆ ₹1 ಕೋಟಿ