ಪಟ್ಟಣ ಪಂಚಾಯಿತಿಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ
ಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಗಳಿಗೆ ತಕ್ಕಂತೆ ಜನಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಆಡಳಿತ ನೀಡಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಪಟ್ಟಣ ಪಂಚಾಯಿತಿಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಅಭಿವೃದ್ಧಿಗೆ ಅಧಿಕಾರವೊಂದೇ ಮಾನದಂಡವಲ್ಲ. ಉತ್ತಮ ಮನಸ್ಸು ಬೇಕು. ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಯಾಗಬೇಕು. ಆದರೆ ಈ ಸರ್ಕಾರದಲ್ಲಿ ಭಾಗ್ಯಗಳ ಯೋಜನೆಯಿಂದ ಖಜಾನೆಯಲ್ಲಿ ಹಣವೇ ಇಲ್ಲದಂತಾಗಿದೆ. ಇನ್ನೆಲ್ಲಿಯ ಅಭಿವೃದ್ಧಿ ಸಾಧ್ಯ ಎಂದರು.ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪಪಂಗೆ ಸಾಕಷ್ಟುಅನುದಾನ ಹರಿದು ಬರುತ್ತಿತ್ತು. ಶೃಂಗೇರಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಯಾಗುತ್ತಿತ್ತು. ಬೈಪಾಸ್ ರಸ್ತೆ ನಿರ್ಮಾಣ, ಕಾಂಕ್ರೀಟ್ ರಸ್ತೆಗಳು ಅಭಿವೃದ್ದಿಯಾಗಿತ್ತು. ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿಯಾಗಬೇಕು. ಮಂಗಳೂರು ಶಿವಮೊಗ್ಗ ರಾ.ಹೆದ್ದಾರಿ 169 ರ ನೆಮ್ಮಾರು ತನಿಕೋಡುವಿನಿಂದ ಮಾಳದವರೆಗೆ ರಸ್ತೆ ಅಗಲೀಕರಣವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಪ್ರಸ್ತಾವನೆ ಅನುಮೋದನೆಯಾಗಿದ್ದು ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
22 ಶ್ರೀ ಚಿತ್ರ 1-