ಉತ್ತಮ ಆರೋಗ್ಯ ಹೆಚ್ಚುವರಿ ಸಂಪತ್ತು ಇದ್ದಂತೆ

KannadaprabhaNewsNetwork |  
Published : Jan 13, 2026, 03:30 AM IST
 | Kannada Prabha

ಸಾರಾಂಶ

ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿಎಲ್‌ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿಎಲ್‌ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ನಗರದ ಬಿಎಲ್‌ಡಿಇ ಟ್ರಾಮಾ ಸೆಂಟರ್‌ನ ಮಿನಿ ಆಡಿಟೋರಿಯಂನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿಎಲ್‌ಡಿಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಕಾರ್ಡ್‌ ವಿತರಿಸಿ ಅವರು ಮಾತನಾಡಿದರು.

ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ ಆರೋಗ್ಯ ಹೊಂದುವುದು ಮಹತ್ವದ್ದಾಗಿದೆ. ನಾವು ಬದುಕಿರುವ ವರೆಗೂ ಯಾವುದೇ ಆರೋಗ್ಯ ಸಮಸ್ಯೆಗೆ ಒಳಗಾಗದೆ, ಪರಾವಲಂಬಿ ಜೀವನ ಸಾಗಿಸದೇ ಸ್ವಾವಲಂಬಿಯಾಗಿ ಬದುಕುವುದು ಅಗತ್ಯವಾಗಿದೆ. ಹೀಗಾಗಿ ಉತ್ತಮ ಆರೋಗ್ಯವನ್ನು ಇಂದು ಹೆಚ್ಚುವರಿ ಸಂಪತ್ತು ಪರಿಗಣಿಸಲಾಗಿದೆ. ಬಿಎಲ್‌ಡಿಇ ನಗರ ಆರೋಗ್ಯ ಕೇಂದ್ರದಲ್ಲಿ ಒಂದೇ ಸೂರಿನಡಿ ಆಯುರ್ವೇದ ಮತ್ತು ಅಲೋಪಥಿ ಚಿಕಿತ್ಸೆ ಸೌಲಭ್ಯ ಒದಗಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೊಸ ಆಯರ್ವೇದ ಕಾಲೇಜು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೇ, ಅಲ್ಲಿಯೂ ನಗರ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗುವುದು ಎಂದರು.

ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ತೇಜಶ್ವಿನಿ ವಲ್ಲಭ, ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಅಂಗಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರನ್ನು ಬಾಗಲಕೋಟೆ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಕಾಲೇಜಿನ ಹಿರಿಯ ಉಪಪ್ರಾಚಾರ್ಯ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಎನ್.ಬೆಂತೂರ, ಉಪ ಅಧೀಕ್ಷಕ ಡಾ.ರವಿ ಬಿರಾದಾರ, ಟ್ರಾಮಾ ಸೆಂಟರ್ ಆಡಳಿತಾಧಿಕಾರಿ ಡಾ.ಶರಣಪ್ಪ ಕಟ್ಟಿ, ಆಸ್ಪತ್ರೆ ಸ್ಥಳೀಯ ವೈದ್ಯಾಧಿಕಾರಿ ಡಾ.ಅಶೋಕ ತರಡಿ, ಟ್ರಾಮಾ ಸೆಂಟರ್ ತುರ್ತು ಚಿಕಿತ್ಸೆ ಘಟಕದ ಮುಖ್ಯ ವೈದ್ಯಾಧಿಕಾರಿ ಡಾ.ಈರಣ್ಣ ಧಾರವಾಡಕರ, ಆಸ್ಪತ್ರೆ ಆಡಳಿತಾಧಿಕಾರಿ ಏಕನಾಥ ಜಾಧವ, ಬಿಎಲ್‌ಡಿಇ ಸಂಸ್ಥೆ ಮಾಧ್ಯಮ ಸಮನ್ವಯಕಾರ ಮಹೇಶ ಶಟಗಾರ, ಬಾಗಲಕೋಟೆ ಜಿಲ್ಲೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳ ಪದಾಧಿಕಾರಿಗಳು, ಸದಸ್ಯರು ಇದ್ದರು.

ಸುಮಾರು 100ಕ್ಕೂ ಹೆಚ್ಚು ಜನ ಬಾಗಲಕೋಟೆ ಜಿಲ್ಲೆಯ ಪತ್ರಕರ್ತರು ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಆಯುರ್ವೇದ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂಜಯ ಕಡ್ಲಿಮಟ್ಟಿ, ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಪಾಟೀಲ ಮತ್ತು ಉಪಪ್ರಾಚಾರ್ಯ ಡಾ.ಶಶಿಧರ ನಾಯಿಕ ಪತ್ರಕರ್ತರಿಗೆ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಬಳಿಕ ಬಿಎಲ್‌ಡಿಇ ಆಸ್ಪತ್ರೆಗೆ ಭೇಟಿ ನೀಡಿದ ಪತ್ರಕರ್ತರು ಅಲ್ಲಿ ಲಭ್ಯವಿವರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌