ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು

KannadaprabhaNewsNetwork |  
Published : Sep 27, 2025, 12:00 AM IST
ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು: ಡಾ. ಶಂಕರ್ | Kannada Prabha

ಸಾರಾಂಶ

ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಂಕರ್ ಹೇಳಿದ್ದಾರೆ. ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಮಾತನಾಡಿ, ವಯೋಸಹಜ ಆಕರ್ಷಣೆಯಿಂದ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಸಮರ್ಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಂಕರ್ ಹೇಳಿದ್ದಾರೆ.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಕೇಂದ್ರ, ಯುವ ರೆಡ್‌ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ “ಆರೋಗ್ಯ ಅರಿವು ಮತ್ತು ಸ್ವಚ್ಛತಾ ಜೀವನ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಾಸನ ಜಿಲ್ಲಾ ಆರೋಗ್ಯ ಕೇಂದ್ರದ ಫ್ಲೂರೋಸಿಸ್ ಕನ್ಸಲ್ಟೆಂಟ್ ಬಿ. ಸಹನಾ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಅರಸೀಕೆರೆ ತಾಲೂಕು ಅತಿ ಹೆಚ್ಚು ಫ್ಲೋರೈಡ್ ಅಂಶ ಹೊಂದಿರುವ ಪ್ರದೇಶವಾಗಿದೆ. ಯುವಜನತೆ ಶುದ್ಧೀಕರಿಸಿದ ನೀರನ್ನೇ ಕುಡಿಯುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಈ ಸಂದೇಶವನ್ನು ತಮ್ಮ ಕುಟುಂಬ ಹಾಗೂ ಸಮುದಾಯಕ್ಕೆ ತಲುಪಿಸಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಜ್ಞೆ ಮಮತಾ ಮಾತನಾಡಿ, ಬೀಡಿ, ಸಿಗರೇಟು, ಗುಟ್ಕಾ ಮುಂತಾದ ತಂಬಾಕು ಪದಾರ್ಥಗಳ ಸೇವನೆಯಿಂದ ಯುವಜನತೆ ಅನೇಕ ಕಾಯಿಲೆಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಎಚ್ಚರಿಸಿದರು.ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಮಾತನಾಡಿ, ವಯೋಸಹಜ ಆಕರ್ಷಣೆಯಿಂದ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಸಮರ್ಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಗೀತಾ ಮಾತನಾಡಿ, ತಜ್ಞರಿಂದ ವಿದ್ಯಾರ್ಥಿಗಳು ಪಡೆಯುವ ಸಂದೇಶಗಳನ್ನು ತಮ್ಮ ಕುಟುಂಬ ಹಾಗೂ ಸಾರ್ವಜನಿಕರಿಗೆ ತಲುಪಿಸುವ ಮೂಲಕ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್. ನಾರಾಯಣ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಚಿತ್ರಕಲಾ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಡಾ. ಎಂ.ಎನ್. ಸುನಿಲ್ ಕುಮಾರ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಸಂತ್ ಕುಮಾರಿ, ಕಾಲೇಜಿನ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV

Recommended Stories

ಹತ್ತು ವರ್ಷವಾದ್ರೂ ನೇಕಾರರ ಮನೆಗಳಿಗಿಲ್ಲ ಮುಕ್ತಿ
ಭೀಮಾನದಿ ನೀರಿನ ಹರಿವು ಮತ್ತೆ ಏರಿಕೆ