ಕುಕನೂರು:ಸತತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯ ಎಂದು ಕೆಎಲ್ಇ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಯಂಕಣ್ಣ ಯರಾಶಿ ಹೇಳಿದರು.
ನಿವೃತ್ತ ಪ್ರಾಚಾರ್ಯ ಕೆ.ಎಚ್. ಛತ್ರದ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವ ಅವಶ್ಯ. ಇಂದಿನ ಜಾಗತಿಕ ದಿನಮಾನಗಳಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆದರೆ ಮುಂದೆ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದರು.
ಪ್ರಾಚಾರ್ಯ ಅರುಣ ಕುಮಾರ್ ಹಿರೇಮಠ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಬೆಳೆಸಿಕೊಂಡು ಪ್ರತಿನಿತ್ಯ ವಿದ್ಯಾಭ್ಯಾಸ ಮಾಡುತ್ತಾ ಉತ್ತಮ ಅಂಕ ಗಳಿಸಬೇಕು ಎಂದರು.ಉಪನ್ಯಾಸಕ ಶರಣಪ್ಪ ಉಮಚಗಿ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿಕೊಟ್ಟರು. ಎಸ್.ಎಸ್. ರಾಜೂರ ವಂದಿಸಿದರು. ಕೆ.ಎ.ಬೇವೂರ ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಾಂತಮ್ಮ ಕಳ್ಳಿಮಠ ಮತ್ತು ವೀಣಾ ಕನಕಗಿರಿ, ಭಾಗ್ಯ ಎಚ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪ್ರಕಾಶ ಗಡ್ಡದ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿದ್ದರು.