ಸೃಜನಶೀಲ ಕಾರ್ಯಕ್ರಮಗಳಿಂದ ಸಮಾಜಕ್ಕೆ ಉತ್ತಮ ಸಂದೇಶ: ಶಾಸಕ ಸಿಮೆಂಟ್‌ ಮಂಜು

KannadaprabhaNewsNetwork |  
Published : Jan 21, 2025, 12:32 AM IST
20ನಾಯಕ | Kannada Prabha

ಸಾರಾಂಶ

ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ. ಅದಕ್ಕೆ ತಕ್ಕ ಇಚ್ಛಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟರು.ಅವರು ಇಲ್ಲಿನ ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಇನ್ನೊಬ್ಬ ಅತಿಥಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ನಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಆ ನಿಟ್ಟಿನಲ್ಲಿ ಬೆಳೆದರೆ ಇಡೀ ಸಮಾಜ ತಿರುಗಿ ನೋಡುವಂತಹ ಅದ್ಭುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ಅದಕ್ಕೆ ಶ್ರೀ ಚೆನ್ನಬಸವೇಶ್ವರ ಯುವಕಮಂಡಲದವರು ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.

ಕೊಲ್ಲೂರು ಆರಕ್ಷಕ ಠಾಣಾ ಸಬ್ಇನ್‌ಸ್ಪೆಕ್ಟರ್‌ ಸುಧಾರಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಸಿಗ್ಮ ಇನ್ಫೋಟೆಕ್‌ನ ವಿನೋದ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿಗಳಾದ ಶಿವ ಆರ್. ಪೂಜಾರಿ, ಉದ್ಯಮಿ ರಾಮನಾಥ್ ನಾಯಕ್ ಗಂಗೊಳ್ಳಿ, ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ಬೆಣಗೆರೆ ಶ್ರೀ ನಾಗ ದೇವಸ್ಥಾನದ ಅಧ್ಯಕ್ಷ ಉಮೇಶ್ ಎಲ್. ಮೇಸ್ತ, ಸಂಗಮೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ನಾರಾಯಣ ಕೆ. ಗುಜ್ಜಾಡಿ, ಉದ್ಯಮಿ ವಾಸುದೇವ ಶೇರುಗಾರ್, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ಉಪಾಧ್ಯಕ್ಷ ದಿನಕರ್ ಬಾಬು, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ಕೆ. ಮೊದಲಾದವರು ಉಪಸ್ಥಿತರಿದ್ದರು.ಚೆನ್ನಬಸವೇಶ್ವರ ಯುವಕ ಮಂಡಲ ಅಧ್ಯಕ್ಷ ಶ್ರೀಧರ ಎನ್. ಪ್ರಾಸ್ತಾವಿಕ ಮಾತುಗಳನಾಡಿದರು. ನಾಗರಾಜ್ ಎನ್.ಡಿ. ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ವಲಯದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಯಿತು. ಪಡುಕೋಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಆನಂದ ಜಿ. ಸನ್ಮಾನಿತರನ್ನು ಪರಿಚಯಿಸಿದರು. ಮಂಜುನಾಥ ಹಿಲಿಯಾಣ ಕಾರ್ಯಕ್ರಮವನ್ನು ನಿರೂಪಿಸಿದರು. ನಿತೇಶ್ ಎನ್.ಡಿ. ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಜಾನಪದ ಜಾತ್ರೆ ಕಾರ್ಯಕ್ರಮ ನೆರವೇರಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು