ಕನ್ನಡಪ್ರಭ ವಾರ್ತೆ ಬೆಳಗಾವಿ
ರೈತರ ಬೇಡಿಕೆಗಳು ನ್ಯಾಯಯುತವಾಗಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬಗ್ಗೆ ಕಾಳಜಿ ಹೊಂದಿವೆ. ಮುಂದಿನ 2-3 ದಿನಗಳಲ್ಲಿ ರೈತರ ಬೇಡಿಕೆಗಳ ಕುರಿತು ಸರ್ಕಾರಗಳಿಂದ ಒಳ್ಳೆಯ ಸುದ್ದಿ ಬರಲಿದೆ ಎಂದು ಭರವಸೆ ನೀಡಿದರು.
ಜತೆಗೆ ಶುಕ್ರವಾರ ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಲಾಗುವುದು. ಹಿಂದಿನ ವರ್ಷವೂ ರೈತರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸಿದೆ. ಹೀಗಾಗಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಹೋರಾಟಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲಾಧಿಕಾರಿಗಳ ಭರವಸೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ಚೂನಪ್ಪ ಪೂಜಾರಿ, ರೈತರ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ದಿನಗಳು ಕಳೆದಂತೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ರೈತರ ಬೇಡಿಕೆಗಳ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.
ರೈತರ ಹುಬ್ಬಳ್ಳಿ ಚಲೋ ಪಾದಯಾತ್ರೆ ಮುಂದುವರಿದಿದ್ದು, ಸರ್ಕಾರದಿಂದ ಬರುವ ಮುಂದಿನ 2-3 ದಿನಗಳ ಬೆಳವಣಿಗೆಯತ್ತ ರೈತರ ಚಿತ್ತ ನೆಟ್ಟಿದೆ.