ಕನ್ನಡಪ್ರಭ ವಾರ್ತೆ ಕುಶಾಲನಗರ
ಶಾಸಕ ಮಂತರ್ ಗೌಡ ಅವರೊಂದಿಗೆ ಹಾರಂಗಿ ಜಲಾಶಯಕ್ಕೆ ಮತ್ತು ಹುದುಗೂರು ಗ್ರಾಮದ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳನ್ನು ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮತ್ತು ಜಿಲ್ಲಾ ಧಿಕಾರಿಗಳು, ಅಣೆಕಟ್ಟು ಅಧಿಕಾರಿಗಳೊಂದಿಗೆ ಮಳೆ ಮತ್ತು ಬರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಸಚಿವರು, ಕಾವೇರಿ ಪಾತ್ರದ ಮಂಡ್ಯ ಜಿಲ್ಲೆಯವನಾದ ತನಗೆ ಕಾವೇರಿ ಜಲಾನಯನ ಪ್ರದೇಶದ ಸಂಪೂರ್ಣ ವಾಸ್ತವ ಪರಿಸ್ಥಿತಿಯ ಅರಿವಿದೆ ಎಂದರು.ಮೂಲ ಕಾವೇರಿಯಲ್ಲಿ ಮಳೆಗಾಲದಲ್ಲಿ ನದಿ ತುಂಬಿ ಹರಿದು ಈ ಭಾಗದ ಜನರು ಸಂಕಷ್ಟಕ್ಕೆ ಈಡಾಗುವುದರೊಂದಿಗೆ ರಾಜ್ಯ ಹಾಗೂ ನೆರೆ ರಾಜ್ಯಗಳ ಕೃಷಿಕರನ್ನು ಸಂತಸ ಪಡಿಸುತ್ತಿರುವ ಜಿಲ್ಲೆಯ ಜನತೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
ಕಾವೇರಿಯ ಅನುಗ್ರಹದೊಂದಿಗೆ ಎರಡು ರಾಜ್ಯಗಳ ನೀರಿನ ವಿವಾದ ಕೊನೆಗೊಳ್ಳಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ ಅವರು ಕಾವೇರಿ ಮುನಿಸಿದರೆ ನಾಡಿನ ಜನರಿಗೆ ಅನ್ನ ಆಹಾರಕ್ಕೆ ಆಪತ್ತು ಎದುರಾಗಲಿದೆ ಎಂದು ಅವರು ಹೇಳಿದರು.
ಸಚಿವರು ಶಾಸಕ ಮಂತರ್ ಗೌಡ, ಜಿಲ್ಲಾಧಿಕಾರಿ ಸೋಮಶೇಖರ್ ಮತ್ತು ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಸತೀಶ್ ಅವರಿಂದ ಮಳೆ ಹಾಗೂ ಬರಪೀಡಿತ ಪ್ರದೇಶಗಳ ಸಮಗ್ರ ಮಾಹಿತಿ ಕಲೆ ಹಾಕಿದರು.
ಸಚಿವ ಪಿ ಎಂ ನರೇಂದ್ರಸ್ವಾಮಿ ಮತ್ತು ಶಾಸಕ ಮಂತರ್ ಗೌಡ, ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ್ ಮೀನಾ, ಅರಣ್ಯ ಇಲಾಖೆ ಮಡಿಕೇರಿ ವಿಭಾಗದ ಅಭಿಷೇಕ್, ತಾಲೂಕು ತಹಸೀಲ್ದಾರ್ ಕೃಷ್ಣಮೂರ್ತಿ, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ ಎಸ್ ಗಿರೀಶ್ ಜಿಲ್ಲಾಧಿಕಾರಿಗಳ ಕಚೇರಿಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್ ಮತ್ತಿತರ ಅಧಿಕಾರಿಗಳು, ಪ್ರಮುಖರು ಬರಮಾಡಿಕೊಂಡರು.