ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ: ಚಲುವರಾಯಸ್ವಾಮಿ

KannadaprabhaNewsNetwork |  
Published : Sep 29, 2025, 01:03 AM IST
28ಕೆಎಂಎನ್ ಡಿ32 | Kannada Prabha

ಸಾರಾಂಶ

ಶ್ರೀರಂಗಪಟ್ಟಣ ದಸರಾ 415 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಧಾರ್ಮಿಕ ಆಚರಣೆಗಳು ಸೇರಿದಂತೆ ಅಭಿವೃದ್ಧಿ ಹಾಗೂ ಐದು ಗ್ಯಾರಂಟಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಉತ್ತಮವಾಗಿ ಮಳೆ, ಬೆಳೆಯಾಗುವ ಜೊತೆಗೆ ಧಾರ್ಮಿಕವಾಗಿಯೂ ಹತ್ತಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಶ್ರೀರಂಗವೇದಿಕೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಶ್ರೀರಂಗಪಟ್ಟಣ ದಸರಾ 415 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಧಾರ್ಮಿಕ ಆಚರಣೆಗಳು ಸೇರಿದಂತೆ ಅಭಿವೃದ್ಧಿ ಹಾಗೂ ಐದು ಗ್ಯಾರಂಟಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ ಎಂದರು.

3.5 ಕೋಟಿ ಮಹಿಳೆಯರು ರಾಜ್ಯದ ಯಾವುದೇ ಭಾಗಗಳಿಗೆ ಉಚಿತವಾಗಿ ಪ್ರಯಾಣ ಬೆಳೆಸಲು ಸಹಕಾರಿಯಾಗಿದೆ ಎಂದು ಹೇಳಿದ ಅವರು, ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಕೋರಿದರು.

ನಂತರ ಸ್ಥಳೀಯ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ಶ್ರೀರಂಗಟಪ್ಟಣ ದಸರಾ ಯಶಸ್ವಿಯಾಗಿ ನಡೆಯಲು ಜಿಲ್ಲಾ ಹಾಗೂ ತಾಲೂಕು ಆಡಳಿತ ಶ್ರಮ ವಹಿಸಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿಗಳ ಆಸೆಯಂತೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಇನ್ನು ಎರಡು ದಿನಗಳ ಕಾಲ ಕಾವೇರಿ ಆರತಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡೆಗಳು ಜರುಗಳು ಜರುಗಲಿದೆ. ಶ್ರೀರಂಗಪಟ್ಟಣ ದಸರಾಗೆ ನೀಡಿರುವ ಅನುದಾನ ಕಡಿಮೆಯಾಗಿದೆ. ಸರ್ಕಾರದಿಂದ 50 ಲಕ್ಷ ರು. ಹಣ ಬಿಡುಗಡೆ ಮಾಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಪಂ ಸಿಇಒ ನಂದಿನಿ, ವೇದಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಚೇತನಾ ಯಾದವ್, ತಾಪಂ ಇಒ ವೇಣು, ಪುರಸಭಾ ಮುಖ್ಯಾಧಿಕಾರಿ ಸತೀಶ, ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್ ಸೇರಿದಂತೆ ಪುರಸಭೆ ಸದಸ್ಯರು ಇದ್ದರು.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ