ಕುವೆಂಪು ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ

KannadaprabhaNewsNetwork |  
Published : Mar 08, 2024, 01:47 AM ISTUpdated : Mar 08, 2024, 01:48 AM IST
ಪೊಟೋ: 7ಎಸ್‌ಎಂಜಿಪಿ01ಭದ್ರಾಔತಿ ತಾಲೂಕು ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ.ಶರತ್ ಅನಂತಮೂರ್ತಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. | Kannada Prabha

ಸಾರಾಂಶ

ಕುವೆಂಪು ಹೆಸರಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು ಎಂದು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕ, ಕುವೆಂಪು ವಿವಿ ನೂತನ ಕುಲತಪಿ ಡಾ.ಶರತ್ ಅನಂತಮೂರ್ತಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕುವೆಂಪು ಹೆಸರಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ ಎಂದು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ.ಶರತ್ ಅನಂತಮೂರ್ತಿ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು. ವಿ.ವಿ.ಯನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ಕೇಂದ್ರಿತವನ್ನಾಗಿಸಿ ಮುಕ್ತ ಮತ್ತು ನಿರ್ಭಿಡೆಯ ವಾತಾವರಣ ನಿರ್ಮಿಸುವುದರತ್ತ ಗಮನಹರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ನಿಕಟಪೂರ್ವ ಪ್ರಭಾರ ಕುಲಪತಿ ಪ್ರೊ.ಎಸ್ ವಿ ಕೃಷ್ಣಮೂರ್ತಿ, ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ಬಂಗಾರಪ್ಪ, ಪ್ರೊ.‌ ಗುರುಲಿಂಗಯ್ಯ, ಡಾ. ಎಂ.ಆರ್‌.ಸತ್ಯಪ್ರಕಾಶ್ ಮತ್ತಿತರರು ಹಾಜರಿದ್ದರು.

- - -

ಬಾಕ್ಸ್‌ ಯು.ಆರ್‌.ಅನಂತಮೂರ್ತಿ ಪುತ್ರ:

ರಾಜ್ಯಪಾಲ ಡಾ.ತಾವರ್ ಚಂದ್ ಗೆಹ್ಲೋಟ್ ಅವರು ಮಾ.5ರಂದು ಡಾ.ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು. ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ. ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿ.ವಿ.ಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.

35ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ವಿವಿಧ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಸಂಶೋಧನಾ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದಾರೆ. ಅವರ ಲೇಖನಗಳು 350ಕ್ಕೂ ಹೆಚ್ಚು ಸಂಶೋಧನಾ ಮರುಉಲ್ಲೇಖಗಳನ್ನು ಪಡೆದುಕೊಂಡಿವೆ. 2006ರಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಕಾಮನ್‌ವೆಲ್ತ್ ವಿಶ್ವವಿದ್ಯಾಲಯಗಳು ಒಕ್ಕೂಟದ ವತಿಯಿಂದ ''''''''ಕಾಮನ್ವೆಲ್ತ್ ಶೈಕ್ಷಣಿಕ ಸಿಬ್ಬಂದಿ ಫೆಲೋಶಿಪ್'''''''' ಗೌರವವನ್ನು ನೀಡಲಾಗಿದೆ.

- - - -7ಎಸ್‌ಎಂಜಿಪಿ01:

ಭದ್ರಾಔತಿ ತಾಲೂಕು ಶಂಕರಘಟ್ಟದ ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ.ಶರತ್ ಅನಂತಮೂರ್ತಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!