ಜ್ಞಾನಸಾಗರ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯು ತನ್ನ ಮೊದಲ ವರ್ಷದ ಫಲಿತಾಂಶದಿಂದ ಆರಂಭವಾಗಿ ಪ್ರತಿ ವರ್ಷ ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ೧೦ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಶೇ. ೧೦೦ ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ಬಂದಿದೆ. ಅದು ಪ್ರಸಕ್ತ ಸಾಲಿಗೂ ಮುಂದುವರಿದಿದೆ. ಪರೀಕ್ಷೆಗೆ ಹಾಜರಾದ ೧೩೯ ವಿದ್ಯಾರ್ಥಿಗಳ ಪೈಕಿ ೩೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, ೬೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೭೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ೨ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಚನ್ನರಾಯಪಟ್ಟಣ: ೨೦೨೫-೨೦೨೬ನೇ ಸಾಲಿನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ೧೦ನೇ ತರಗತಿ ಫಲಿತಾಂಶದಲ್ಲಿ ಶೇ.೧೦೦ ರಷ್ಟು ಫಲಿತಾಂಶದೊಂದಿಗೆ ಮೈಸೂರು ವಲಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿರಿಮೆ ಜ್ಞಾನಸಾಗರ ಇಂಟರ್‌ನ್ಯಾಷನಲ್ ಸ್ಕೂಲ್‌ನದ್ದಾಗಿದೆ.
ಜ್ಞಾನಸಾಗರ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯು ತನ್ನ ಮೊದಲ ವರ್ಷದ ಫಲಿತಾಂಶದಿಂದ ಆರಂಭವಾಗಿ ಪ್ರತಿ ವರ್ಷ ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ೧೦ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಶೇ. ೧೦೦ ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ಬಂದಿದೆ. ಅದು ಪ್ರಸಕ್ತ ಸಾಲಿಗೂ ಮುಂದುವರಿದಿದೆ. ಪರೀಕ್ಷೆಗೆ ಹಾಜರಾದ ೧೩೯ ವಿದ್ಯಾರ್ಥಿಗಳ ಪೈಕಿ ೩೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, ೬೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೭೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ೨ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳನ್ನು ನಾಗೇಶ್ ಎಜುಕೇಷನ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ. ನಾಗೇಶ್ ಸೇರಿ ಆಡಳಿತ ಮಂಡಳಿ ಅಭಿನಂದಿಸಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.