ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ರಸ್ತೆ ಅಗತ್ಯ

KannadaprabhaNewsNetwork |  
Published : Sep 10, 2025, 01:03 AM IST
ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ರಸ್ತೆ ಮರುಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆನೆರವೇರಿಸಿದರು. | Kannada Prabha

ಸಾರಾಂಶ

ಡಿ.ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನ ಬೇಡಿಕೆಯಾಗಿದ್ದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಸ್ತೆಗಳು ಅಭಿವೃದ್ಧಿಯಾದರೆ ತಾಲೂಕು ಅಭಿವೃದ್ಧಿ ಹೊಂದಿದಂತೆ, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಗೌರಿಬಿದನೂರುತಾಲೂಕಿನ ರಾಜ್ಯ ಹೆದ್ದಾರಿ-09ರ ಬೈಪಾಸ್‌ ನಿಂದ ಡಿ.ಪಾಳ್ಯ,ನರಸಾಪುರ, ಜಗರೆಡ್ಡಿಹಳ್ಳಿ ಆಂಧ್ರಗಡಿ ಮಾರ್ಗವಾಗಿ ಹುಣಸೇನಹಳ್ಳಿ ಹತ್ತಿರ ಜಿಲ್ಲಾ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯ 5 ಕೋಟಿ ವೆಚ್ಚದ ರಸ್ತೆ ಮರುಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಡಿ.ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನ ಬೇಡಿಕೆಯಾಗಿದ್ದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಸ್ತೆಗಳು ಅಭಿವೃದ್ಧಿಯಾದರೆ ತಾಲೂಕು ಅಭಿವೃದ್ಧಿ ಹೊಂದಿದಂತೆ, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

30 ಗ್ರಾಮಗಳಿಗೆ ಸಂಪರ್ಕ ರಸ್ತೆ

ಸುಮಾರು ಮೂವತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸದರಿ ರಸ್ತೆ ಸಾಕಷ್ಟು ಹದಗೆಟ್ಟಿರುವುದು ನನ್ನ ಗಮನಕ್ಕೆ ಬಂದಿತ್ತು ,ಪ್ರತಿದಿನವೂ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದಿಂದ ಸುಮಾರು ಐದು ಕೋಟಿ ರೂಪಾಯಿಗಳನ್ನು ಸರ್ಕಾರದಿಂದ ಮಂಜೂರಾತಿ ಮಾಡಿಸಿಕೊಂಡು ಬಂದಿರುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಮಾತನಾಡಿ, ಸದರಿ ಡಿ.ಪಾಳ್ಯ ರಸ್ತೆಯ ಅಭಿವೃದ್ಧಿ ವಿಚಾರವಾಗಿ ಈ ಭಾಗದ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕ ಪುಟ್ಟಸ್ವಾಮಿಗೌಡರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಪರಿಣಾಮ ಶಾಸಕರು ನಮ್ಮ ಮನವಿಯನ್ನು ಪುರಸ್ಕರಿಸಿ , ರಸ್ತೆಯ ಅಭಿವೃದ್ದಿಗೆ ಮುಂದಾಗಿದ್ದಾರೆ. ಶಾಸಕರು ಕೇವಲ ಎರಡು ವರ್ಷದ ಅವಧಿಯಲ್ಲಿ ಸುಮಾರ ಇನ್ನೂರು ಕೋಟಿ ರುಪಾಯಿಗಳ ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣ್, ನಗರಸಭೆ ಸದಸ್ಯ ಕಲ್ಲೀಂ, ರಾಜಕುಮಾರ, ಶ್ರೀಕಾಂತ್, ಶ್ರೀರಾಮಪ್ಪ , ಚಂದ್ರಮೋಹನ್ ,ಅಬುಬೇಕರ್ ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರರೆಡ್ಡಿ, ಮುಖಂಡರಾದ ಲಕ್ಷ್ಮೀನಾರಾಯಣ್, ಶರತ್,ಅನಿಲ್, ಹನುಮಂತರಾಯಪ್ಪ,ನರಸಿಂಹಮೂರ್ತಿ, ಅಶೋಕ್,ಚನ್ನಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ