ಕನ್ನಡಪ್ರಭ ವಾರ್ತೆ ಮದ್ದೂರು
ಮನ್ಮುಲ್ ಮಾಜಿ ನಿರ್ದೇಶಕಿ ರೂಪ ಕುಮಾರಸ್ವಾಮಿ ಅವರಿಗೆ ಬೆಲ್ಲದಾರತಿ ಬೆಳಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ನಂತರ ಜೆಡಿಎಸ್ ಕಾರ್ಯಕರ್ತರಿಗೆ ಅಭಯ ನೀಡಿದ ಕುಮಾರಸ್ವಾಮಿ, ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲ ಸಿಗುತ್ತದೆ. ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಬೇಕು ಒಂದು ಸಲಹೆ ನೀಡಿದರು.
ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಆಕಾಂಕ್ಷಿತ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಪಕ್ಷ ಸಂಘಟನೆಯಲ್ಲಿ ತೊಡಗಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಈ ವೇಳೆ ಬಿಜೆಪಿ ಮುಖಂಡರಾದ ಎಂ.ಎಸ್ .ಜಗನ್ನಾಥ್, ವೀರಭದ್ರ ಸ್ವಾಮಿ, ಗುರು ಮಲ್ಲೇಶ, ಧನಂಜಯ, ಶಿವರಾಜು, ಅಭಿಷೇಕ್ ಮತ್ತಿತರರಿದ್ದರು.ಎಚ್ಡಿಕೆ ಮತ್ತೆ ರಾಜ್ಯದ ಸಿಎಂ ಆಗುವ ಯೋಗ: ಆರ್ಚಕರ ಆಶೀರ್ವಾದ
ಮದ್ದೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ 66ನೇ ಜನ್ಮದಿನದ ಅಂಗವಾಗಿ ಪಟ್ಟಣದ ವಿವಿಧ ದೇವಾಲಯಗಳ ಅರ್ಚಕರು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು. ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಬಾಲಾಜಿ, ಕಾಶಿ ವಿಶ್ವನಾಥ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ ಪ್ರಧಾನ ಮಾಡಿ ಆಶೀರ್ವದಿಸಿದರು.ಇದೇ ವೇಳೆ ಸಚಿವ ಎಚ್.ಡಿ.ಕುಮಾರಸ್ವಾಮಿ ಜನ್ಮ ದಿನಾಂಕದ ಯೋಗದ ಫಲವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹಾರೈಸಿದರು.