ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಕ್ರೀಡಾಸಕ್ತಿ ಬೆಳೆಸಬೇಕು: ಚಲುವರಾಯಸ್ವಾಮಿ

KannadaprabhaNewsNetwork |  
Published : Aug 31, 2026, 01:30 AM IST
30ಕೆಎಂಎನ್ ಡಿ15 | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯಾವಂತರಾಗಿ ದೇಶದ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಏನಾದರೊಂದು ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಪಠ್ಯಪುಸ್ತಕ, ಪೌಷ್ಟಿಕಾಂಶಯುಕ್ತ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಸೇರಿದಂತೆ ಹಲವು ಬಗೆಯ ಸೌಲಭ್ಯಗಳನ್ನು ಸಂಪೂರ್ಣ ಉಚಿತ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಸಾಮಾನ್ಯ ಜ್ಞಾನ, ಉತ್ತಮ ಸಂಸ್ಕಾರ, ಕ್ರೀಡಾಸಕ್ತಿ ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ತಾಲೂಕಿನ ಇಜ್ಜಲಘಟ್ಟ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಕಳೆದ ಸಾಲಿನ ವಿವೇಕ ಯೋಜನೆಯ 13.60 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯೆ ಕಲಿಯುವ ಮಕ್ಕಳಿಗೆ ಉತ್ತಮ ಭವಿಷ್ಯವಿದೆ ಎಂದರು.

ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯಾವಂತರಾಗಿ ದೇಶದ ಸತ್ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಏನಾದರೊಂದು ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಪಠ್ಯಪುಸ್ತಕ, ಪೌಷ್ಟಿಕಾಂಶಯುಕ್ತ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಸೇರಿದಂತೆ ಹಲವು ಬಗೆಯ ಸೌಲಭ್ಯಗಳನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದೆ ಎಂದರು.

ಸಮಾರಂಭದಲ್ಲಿ ತಹಸೀಲ್ದಾರ್ ಲೆಫ್ಟಿನೆಂಟ್ ಜನರಲ್ ಡಾ.ಅಶೋಕ್, ತಾಪಂ ಇಒ ಬಿ.ಎಸ್.ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು, ಶಾಲೆಯ ಮುಖ್ಯಶಿಕ್ಷಕಿ ಗೌರಮ್ಮ, ಮುಖಂಡರಾದ ಸುನಿಲ್ ಲಕ್ಷ್ಮಿಕಾಂತ್, ಉಮೇಶ್, ಲೋಕೇಶ್, ಸಾಮಕಹಳ್ಳಿ ನಾಗರಾಜು ಸೇರಿದಂತೆ ಹಲವರು ಇದ್ದರು.ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ: ಎಚ್ಡಿಕೆಮಂಡ್ಯ: ಹಾಲಹಳ್ಳಿ ಸರ್ಕಾರಿ ಶಾಲೆಯ ಎರಡು ನೂತನ ಕೊಠಡಿಗಳನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಶಿಕ್ಷಣಕ್ಕೆ ಅತಿ ಹೆಚ್ಚು ಒತ್ತು ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮವಹಿಸಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಒ ಕೆ.ಆರ್.ನಂದಿನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್, ಮುಖಂಡರಾದ ಬಿ.ಆರ್.ರಾಮಚಂದ್ರ, ಮಹಾಲಿಂಗೇಗೌಡ ಮುದ್ದನಘಟ್ಟ, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಮಾಜಿ ಸದಸ್ಯ ರಾಮಲಿಂಗಯ್ಯ ಸೇರಿದಂತೆ ಜೆಡಿಎಸ್ ಮುಖಂಡರು ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರೇ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಶಂಕರಲಿಂಗೇಗೌಡ
ಹಲಗೂರು ಲಯನ್ಸ್ ಭವನದಲ್ಲಿ ಪತ್ರಿಕಾ ದಿನಾಚರಣೆ