-ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಜೆ.ಪಿ. ನಾರಾಯಣ
ಕನ್ನಡಪ್ರಭ ವಾರ್ತೆ ಸುರಪುರಆಧುನಿಕ ಕೃಷಿ ಪದ್ಧತಿಯಲ್ಲಿ ರೈತರಿಗೆ ಹಲವು ಹೊಸ ತಂತ್ರಜ್ಞಾನಗಳು ಹಾಗೂ ಸೌಲಭ್ಯಗಳು ಲಭ್ಯವಿದ್ದು, ಅವುಗಳ ಬಗ್ಗೆ ಸಮರ್ಪಕ ಅರಿವು ಹೊಂದಿ ಬಳಸಿಕೊಂಡರೆ ಉತ್ತಮ ಇಳುವರಿ ಮತ್ತು ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುತ್ತದೆ ಎಂದು ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಜೆ.ಪಿ. ನಾರಾಯಣ ಹೇಳಿದರು.
ನಗರದ ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ''''ಕೃಷಿಯಲ್ಲಿ ನ್ಯಾನೊ ಗೊಬ್ಬರಗಳ ಬಳಕೆ'''' ಕುರಿತ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷಿಯಲ್ಲಿ ಜೈವಿಕ, ಸಾವಯವ ಹಾಗೂ ನ್ಯಾನೊ ಗೊಬ್ಬರಗಳ ಸಮರ್ಪಕ ಬಳಕೆಯ ಕುರಿತು ರೈತರು ಜಾಗೃತರಾಗಬೇಕು. ಇವುಗಳ ಸಮರ್ಪಕ ಬಳಕೆಯಿಂದ ಉತ್ಪಾದಕತೆ ಹೆಚ್ಚಿಸುವುದರ ಜೊತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.
ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶಾಮರಾವ್ ಕೆ ಅವರು ಸಾವಯವ ಕೃಷಿ, ಸಮಗ್ರ ಕೃಷಿ ಪದ್ಧತಿ ಹಾಗೂ ನ್ಯಾನೊ ಗೊಬ್ಬರಗಳ ಬಳಕೆಯ ಕುರಿತು ರೈತರಿಗೆ ಮಾಹಿತಿ ನೀಡಿದರು.
-----
ಸುರಪುರದ ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ನ್ಯಾನೊ ಗೊಬ್ಬರಗಳ ಬಳಕೆ ಕುರಿತ ವಿಚಾರ ವಿನಿಮಯ ಕಾರ್ಯಕ್ರಮವನ್ನು ಡಾ. ಜೆ.ಪಿ. ನಾರಾಯಣ ಅವರು ಉದ್ಘಾಟಿಸಿದರು. ಕೃಷಿ ಸಹಾಯಕ ನಿರ್ದೇಶಕ ರಾಮನಗೌಡ ಮಾಲಿ ಪಾಟೀಲ್, ಪ್ರಶಾಂತ ವಿ. ಇದ್ದರು.