)
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಲ್ಲೇಶ್ವರ, ಮಹಾಲಕ್ಷ್ಮೀ ಲೇಔಟ್, ಹೆಬ್ಬಾಳ, ಜೆ.ಸಿ. ನಗರ, ಸಂಜಯನಗರ, ಶ್ರೀರಾಮಪುರ, ಸುಬ್ರಹ್ಮಣ್ಯ ನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿದಂತೆ ಉತ್ತರ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ನಗರ ವ್ಯಾಪ್ತಿ ವರದಿಯಾಗಿದ್ದ ಮನೆಗಳ್ಳತನ, ಸುಲಿಗೆ, ದರೋಡೆ ಸೇರಿದಂತೆ ಒಟ್ಟು 75 ಪ್ರಕರಣಗಳನ್ನು ಪತ್ತೆ ಹಚ್ಚಿ 83 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಈ ಆರೋಪಿಗಳಿಂದ 1.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಹೀಗೆ ವಶಪಡಿಸಿಕೊಂಡ ವಸ್ತುಗಳಲ್ಲಿ 1.8 ಕೆಜಿ ಚಿನ್ನಾಭರಣ, 4.58 ಗ್ರಾಂ ವಜ್ರ, 1.7 ಕೆಜಿ ಬೆಳ್ಳಿ, 54 ಬೈಕ್‌ಗಳು ಹಾಗೂ 67 ಮೊಬೈಲ್‌ಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.