ಕನ್ನಡಪ್ರಭ ವಾರ್ತೆ ಉಡುಪಿ
ಮೇ 18ರಂದು ರಾತ್ರಿ ಘಟನೆ ನಡೆದಿದ್ದರೂ, ಎರಡು ದಿನಗಳ ತಡವಾಗಿ ಮೇ 20ರಂದು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿರಲಿಲ್ಲವೇ? ಪರಿಶೀಲಿಸಿದ್ದರೆ ಘಟನೆಯ ಗಂಭೀರತೆಯನ್ನು ಅರಿತು ಪೊಲೀಸರು ಜಾಣ ಮೌನ ತೋರಿಸಿರುವುದು ಯಾಕೆ ಎಂಬ ಅನುಮಾನ ಕಾಡುತ್ತಿದೆ ಎಂದವರು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಬಜರಂಗದಳ, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರನ್ನು ಸಮಾಜದಲ್ಲಿ ಶಾಂತಿ ಭಂಗವಾಗುತ್ತದೆ ಎಂಬ ಕಾರಣ ನೀಡಿ, ಗಡಿಪಾರು ಮಾಡುತ್ತಾರೆ. ರಾಜ್ಯದಲ್ಲಿ ಇನ್ನು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಈಗಾಗಲೇ ರೌಡಿ ಶೀಟರ್‌ಗಳಾಗಿರುವ ಈ ಪುಂಡರನ್ನು ಯಾಕೆ ಗಡಿಪಾರು ಮಾಡಿಲ್ಲ ಎಂದು ಹೆಗ್ಡೆ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.ಭ್ರಷ್ಟಾಚಾರ ರಹಿತ ಅಧಿಕಾರಿ ಎಂದು ಹೆಸರು ಪಡೆದಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಅವರಿಗೆ ಈ ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರದ ಒತ್ತಡವಿತ್ತೇ? ಗಂಭೀರ ಪ್ರಕರಣ ನಡೆದು ವಾರ ಕಳೆದರೂ, ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸ್ ಇಲಾಖೆ ಸಂಪೂರ್ಣ ವಿಫಲವಾಗಿದ್ದಾರೆ ಎಂದವರು ಆರೋಪಿಸಿದ್ದಾರೆ.