ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ತಾಲೂಕು ಜಾನಪದ ಪರಿಷತ್ತು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಆಶ್ರಯದಲ್ಲಿ ನಡೆದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಂತವೇರಿಗೌಡರು ನೈತಿಕಪ್ರಜ್ಞೆ ಹೊಂದಿರುವ ಜತೆ ಬಡವರ ಪರ ಧ್ವನಿಯಾಗಿದ್ದರು. ಜನಪರ ಕಾಳಜಿ ಹೊಂದಿದ ಮಹಾನ್ ನಾಯಕರಾಗಿದ್ದರು. ವಿದ್ಯಾರ್ಥಿ ಜೀವನದಿಂದಲೇ ಸ್ವಾತಂತ್ರ್ಯ ಹೋರಾಟ ಚಳವಳಿಯಲ್ಲಿ ಧುಮುಕಿದ್ದರು. ಶಾಸಕರಾದ ಸಂದರ್ಭ ಭ್ರಷ್ಟಾಚಾರರಹಿತ ಆಡಳಿತ ನಡೆಸಿದ್ದರು. ಕುಟುಂಬ ರಾಜಕಾರಣದಿಂದ ದೂರ ಉಳಿದಿದ್ದರು. ಗೋಪಾಲಗೌಡರ ಅವರ ಹೆಸರು ಹೇಳಿಕೊಂಡು ಹಲವು ಮುಖಂಡರು ರಾಜಕೀಯ ಮಾಡಿದ್ದಾರೆ. ಆದರೆ ಅವರನ್ನು ಸ್ಮರಣೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ.ಮಂಜುನಾಥ್ ಮಾತನಾಡಿ, ಶಾಂತವೇರಿ ಗೋಪಾಲಗೌಡರು ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿಹಿಡಿದ ಮಹಾನ್ ನಾಯಕರಾಗಿದ್ದರು. ದಾರ್ಶನಿಕರು, ಪ್ರಗತಿಪರ ಚಿಂತಕರ ಕೃತಿ ಓದುವ ಮೂಲಕ ಅರಿವು ವಿಸ್ತರಿಸಿಕೊಂಡಿದ್ದರು. ಶಾಸಕರಾಗಿ ಯಾವುದೇ ಆಮಿಷಕ್ಕೆ ಒಳಗಾಗದೇ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದರು. ಶಾಸಕರಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು, ಕನ್ನಡ ಭಾಷೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಶಾಂತವೇರಿ ಗೋಪಾಲ ಗೌಡರ ಆದರ್ಶಗಳನ್ನು ಯುವ ಸಮುದಾಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
- - - -19ಕೆಎಸ್‌ಕೆಪಿ1: