ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಆಡಳಿತ ಬಲಪಡಿಸಬೇಕು:
ಉತ್ತಮ ಆಡಳಿತದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ. ತಳಮಟ್ಟದಿಂದ ಆಡಳಿತವನ್ನು ಬಲಪಡಿಸುವ ಮತ್ತು ಸಾಮಾನ್ಯ ಜನರಿಗೆ ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ‘ಸುಶಾಸನ ಸಪ್ತಾಹ ಅಭಿಯಾನ’ದ ಮುಖ್ಯ ಗುರಿಯಾಗಿದೆ ಎಂದರು.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಸುಶಾಸನ ಸಪ್ತಾಹ ಪ್ರಶಾಸನ ಗ್ರಾಮಗಳ ಕಡೆಗೆ ಎಂಬ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ. ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಈ ಸಪ್ತಾಹದ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಿವು ಮೂಡಿಸಲು ಏರ್ಪಡಿಸಿರುವ ಕಾರ್ಯಾಗಾರವು ಆಡಳಿತವನ್ನು ಪರಿಣಾಮಕಾರಿಯಾಗಿ ತಲುಪಿಸಲು ತುಂಬಾ ಸಹಕಾರಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಉತ್ತಮ ಆಡಳಿತಕಳೆದ 19ನೇ ತಾರೀಖಿನಿಂದ ಜಿಲ್ಲಾಡಳಿತ ಕೈಗೊಂಡಿರುವ ಸಪ್ತಾಹವು ಜನರಿಗೆ ಅನುಕೂಲವಾಗಿದೆ. ಕಂದಾಯ ದಾಖಲೆಗಳು ಸೇರಿದಂತೆ ಇತರ ದಾಖಲೆಗಳನ್ನು ಜನರಿಗೆ ಸಕಾಲದಲ್ಲಿ ತಲುಪಿಸುವ ವ್ಯವಸ್ಥೆಯ ಉತ್ತಮ ಆಡಳಿತಕ್ಕಾಗಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 4ನೇ ಸ್ಥಾನವನ್ನು ಗಳಿಸಿದೆ. ರೈತರಿಗೆ 2000 ಪಹಣಿಗಳನ್ನು ವಿತರಿಸಲಾಗಿದೆ. ದಾಖಲೆಗಳನ್ನು ಜನರಿಗೆ ನೀಡಿದ್ದಕ್ಕಾಗಿಯೇ 2 ಕೋಟಿ ಹಣ ಸರ್ಕಾರದ ಬೊಕ್ಕಸಕ್ಕೆ ಸೇರಿದೆ. ಇ-ಪೌತಿ ಖಾತೆ ಮೂಲಕ 15,000 ಖಾತೆಗಳನ್ನು ಮಾಡಿಕೊಡಲಾಗಿದೆ ಎಂದರು.
2025-26ನೇ ಸಾಲಿನಲ್ಲಿ ಅಕ್ಟೋಬರ್ ಅಂತ್ಯಕ್ಕೆ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಪಶು ಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಕರ ವಸೂಲಿಯಲ್ಲಿ ಕಳೆದ 4 ತಿಂಗಳನಿಂದ ನಮ್ಮ ಜಿಲ್ಲೆಯ ಗ್ರಾಮ ಪಂಚಾಯ್ತಿಗಳು ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿವೆ. ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಿ ರಾಜ್ಯ ಮಟ್ಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವಿಶೇಷ ಗಮನವನ್ನು ಸೆಳೆದಿದೆ. ದಾಖಲಾತಿಗಳ ಡಿಜಿಟಲೀಕರಣ ಕಾರ್ಯವನ್ನು ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲ್ಲೂಕುಗಳ ತಹಸೀಲ್ದಾರ್ ಕಚೇರಿಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.ದೃಢೀಕೃತ ಕಂದಾಯ ದಾಖಲೆ
ಉಳಿದ ತಾಲ್ಲೂಕುಗಳಲ್ಲೂ ಮುಂದಿನ ಕೆಲವು ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗುವುದು. ಜನರು ಆನ್ ಲೈನ್ ನಲ್ಲೇ ದೃಢೀಕೃತ ಕಂದಾಯ ದಾಖಲೆಗಳನ್ನು ತೆಗೆದುಕೊಳ್ಳುವ ರೀತಿ ಎಲ್ಲ ಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಎಲ್ಲ ಸೇವೆಗಳನ್ನು ಇನ್ನಷ್ಟು ಉತ್ತಮಗೊಳಿಸಿ ಸುಶಾಸನ ಸಪ್ತಾಹವನ್ನು ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಸಕಾಲ ಸಂಯೋಜಕ ವಸಂತ್, ಜಿಪಂ ಮುಖ್ಯ ಲೆಕ್ಕಧಿಕಾರಿ ರಘು, ಸಹಾಯಕ ಕಾರ್ಯದರ್ಶಿ ಮುನಿರಾಜು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬಂದಿ ಇದ್ದರು.