ಪಿಲಿಕುಳ ಝೂ ಅರಣ್ಯ ಇಲಾಖೆಗೆಹಸ್ತಾಂತರಿಸಲು ಸರ್ಕಾರ ಒಪ್ಪಿಗೆ

KannadaprabhaNewsNetwork |  
Published : Jul 22, 2026, 03:15 AM IST
ಗುಬ್ಬಿ ತಾಲ್ಲೂಕಿನ ಹೂವಿನಕಟ್ಟೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಓ ಅಶ್ವೀಜ ಭೇಟಿ ನೀಡಿ ಪರಿಶೀಸಿದರು. | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿದೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿದೆ.

ಪಿಲಿಕುಳ ಜೈವಿಕ ಉದ್ಯಾನದ ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ ‘ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್’ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ‌ ಪರ ರಾಜ್ಯ ಅಡ್ವೋರೆಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು. ನಿರ್ವಹಣೆ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಮೃಗಾಲಯ ಪ್ರಾಧಿಕಾರದ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಮೃಗಾಲಯದಲ್ಲಿರುವ 652 ಪ್ರಾಣಿಗಳ ಸುರಕ್ಷತೆ ಮತ್ತು ಕಾಳಜಿ ಸರ್ಕಾರದ ಆದ್ಯತೆಯಾಗಿದೆ ಎಂದು ಭರವಸೆ ನೀಡಿದರು.ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಮೃಗಾಯಲಯ ವರ್ಗಾವಣೆ ಹೇಗಿರಲಿದೆ? ಕೇವಲ ಮೃಗಾಲಯ ಇರುವ ಸೀಮಿತ ಭೌಗೋಳಿಕ ಪ್ರದೇಶ ಮತ್ತು ಪ್ರಾಣಿಗಳಿಗೆ ಮಾತ್ರ ಸೀಮಿತವಾಗಿರಲಿದೆಯೇ? ಒಟ್ಟಾರೆ ಜೈವಿಕ ಉದ್ಯಾನವನದ ವಿಚಾರ ಏನಾಗಲಿದೆ ಎಂಬ ವಿವರಣೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ
ರೈತ ವಿರೋಧ ನೀತಿ ಖಂಡಿಸಿ ಪ್ರತಿಭಟನೆ