ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಎಲ್ಲಾ ಶಾಲೆಗಳನ್ನೂ ಸಹ ಹಬ್ಬದ ರೀತಿಯಲ್ಲಿ ಸಿಂಗಾರಗೊಳಿಸಿ ಮಕ್ಕಳನ್ನು ಸ್ವಾಗತಿಸಲು ಸಜ್ಜುಗೊಳಿಸಲಾಗಿತ್ತು.
ಹೊನ್ನಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಗ್ರಾಮದ ಮುಖ್ಯ ರಸ್ತೆಯಲ್ಲಿ ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆತಂದು ಶಾಲೆ ಮುಖ್ಯಧ್ವಾರದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.ಈ ವೇಳೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಸುರೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರ ಉಚಿತವಾಗಿ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವೂ ಸಿಗುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಮಕ್ಕಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಶಿಕ್ಷಕರು
ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭದ ಹಿನ್ನೆಲೆಯಲ್ಲಿ ಶಾಲೆಗಳಿಗೆ ತಳಿರು ತೋರಣ ಸಿಂಗರಿಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶಿಕ್ಷಕರು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.
ಶಾಲೆಯಲ್ಲಿ ಯು ಕೆ ಜಿ.ಎಲ್ ಕೆ ಜಿ ಗೆ ದಾಖಲಾತಿ ಆರಂಭಗೊಂಡಿದೆ. ಪೋಷಕರು ಸರತಿ ಸಾಲಿನಲ್ಲಿ ನಿಂತು ದಾಖಲಾತಿ ಮಾಡಲು ಕಂಡುಬಂದಿದ್ದು ಮೊದಲನೇ ದಿನ ವಿಶೇಷವಾಗಿತ್ತು. ಸರ್ಕಾರಿ ಶಾಲೆ ಬೆಳವಣಿಗೆಗೆ ಫ್ರೀ ನರ್ಸರಿ ದಾಖಲಾತಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿಗೆ ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಡಬೇಕೆಂಬ ಪೋಷಕರ ಬೇಡಿಕೆ ಕಂಡು ಬಂದಿತ್ತು.