ಬಾಲಕರ ಸರ್ಕಾರಿ ಪಪೂ ಕಾಲೇಜು ಕಟ್ಟಡ ಶಿಥಿಲ

KannadaprabhaNewsNetwork |  
Published : Aug 07, 2026, 01:30 AM IST
06ಕೆಪಿಆರ್‌ಸಿಆರ್‌ 03:  | Kannada Prabha

ಸಾರಾಂಶ

Government Boys' Pre-University College building is dilapidated.

- ಎರಡು ಕೊಠಡಿಗಳ ಮೇಲ್ಛಾವಣೆ ಕುಸಿತ, ಆತಂಕ ಸೃಷ್ಟಿ । ಅಧಿಕಾರಿಗಳ ಭೇಟಿ ಪರಿಶೀಲನೆ, ತರಗತಿ ಬಹಿಷ್ಕರಿಸಿ ದಿಢೀರ್‌ ಪ್ರತಿಭಟನೆಕನ್ನಡಪ್ರಭ ವಾರ್ತೆ ರಾಯಚೂರು

ಇಲ್ಲಿನ ಅಂದ್ರೂಲ್‌ ಖಿಲ್ಲಾ (ಹಳೆಯ ಡಿಡಿಪಿಐ ಕಚೇರಿ ಹಿಂದೆ) ಇರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಗುರುವಾರ ಎರಡು ಕೊಠಡಿಗಳ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಠವಷಾತ್‌ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ. ಘಟನೆಯಿಂದಾಗಿ ಕಾಲೇಜಿನ ಉಪನ್ಯಾಸಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ನಗರದ ಪ್ರಮುಖ ಕಾಲೇಜುಗಳಲ್ಲಿ ಈ ಬಾಲಕರ ಪದವಿ ಪೂರ್ವ ಕಾಲೇಜು ಒಂದಾಗಿದ್ದು, ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ 450 ಕ್ಕು ಹೆಚ್ಚು ಬಾಲಕರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸುಮಾರು 30 ವರ್ಷದ ಹಳೆಯ ಕಟ್ಟಡವನ್ನು ಹೊಂದಿರುವ ಕಾಲೇಜಿನಲ್ಲಿ ತರಗತಿ ಕೋಣೆ, ಉಪ್ಯಾಸಕರು ಹಾಗೂ ಪ್ರಾಚಾರ್ಯರ ಕೊಠಡಿಗಳೇಲ್ಲವೂ ಶಿಥಿಲಗೊಂಡಿವೆ. ಬಹುತೇಕ ಕೊಠಡಿಗಳ ಛತ್ತಿನ ಸಿಮೆಂಟ್‌ ಕುಸಿದುಬಿದ್ದು ರಾಡ್‌ ಗಳು ಕಾಣಿಸುತ್ತಿವೆ. ಇದೀಗ ಮಳೆಯಾಗುತ್ತಿರುವುದರಿಂದ ನೆಂದಿರುವ ಮೇಲ್ಛಾವಣಿಯು ಕುಸಿದಿದ್ದು, ಆತಂಕಗೊಂಡ ಉಪನ್ಯಾಸಕರು, ವಿದ್ಯಾರ್ಥಿಗಳು ತರಗತಿಯಿಂದ ಹೊರಗಡೆ ಬಂದಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಹಸೀಲ್ದಾರ್‌ ಸುರೇಶ ವರ್ಮಾ, ಸಿಪಿಐ ದಾದಾವಲಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಟ್ಟಡ ಗುಣಮಟ್ಟದ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಥಿಲಾವಸ್ಥೆ ತಲುಪಿರುವ ಕಾಲೇಜಿಗೆ ಹೊಸ ಕಟ್ಟಡವನ್ನು ನಿರ್ಮಿಸುವಂತೆ ಪ್ರಾಚಾರ್ಯರು ಸಂಬಂಧಿಸಿದ ಶಾಸಕರು, ಜಿಲ್ಲಾಧಿಕಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಹವಲು ಸಲ ಪತ್ರ ಬರೆದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಕೆಕೆಆರ್‌ಡಿಬಿ ಅಡಿ ಹೊಸ ಕೋಠಡಿ ನಿರ್ಮಾಣದ ಪ್ರಸ್ತಾವನೆಯಿದ್ದರೂ ಅದು ಕಾರ್ಯರೂಪ ಕಂಡಿಲ್ಲ. ಇದರಿಂದಾಗಿ ಬಡ ವಿದ್ಯಾರ್ಥಿಗಳು, ಉಪನ್ಯಾಸಕರು ಭೀತಿಯಲ್ಲಿ ತರಗತಿಯಲ್ಲಿ ಕುಳಿದುಕೊಳ್ಳುವ ದುಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಧಿಡೀರ್ ಪ್ರತಿಭಟನೆ: ತರಗತಿಯಲ್ಲಿ ಛತ್ತು ಉದುರಿ ನಡೆದ ಅಪಘಾತವನ್ನು ಖಂಡಿಸಿ, ಕಾಲೇಜು ವಿದ್ಯಾರ್ಥಿಗಳು ತರಗತಿಯನ್ನು ಬಹೀಷ್ಕರಿಸಿ, ಎಐಡಿಎಸ್ಓ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆಯ ವಿರುದ್ಧ ಧಿಡೀರ್ ಪ್ರತಿಭಟನೆ ನಡೆಸಿದರು. ಹೊಸ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

---

ಬಾಕ್ಸ್‌

ಕ್ಲಾಸ್‌ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ

ಕಾಲೇಜಿನ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದ ಘಟನೆ ನಡೆಯುತ್ತಿದ್ದಂತೆಯೇ ಎಚ್ಚೆತ್ತ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಗೆ ಮುಂದಾದರು. ಕಾಲೇಜಿನ ಮುಂಭಾಗದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ಎಐಡಿಎಸ್ಒ ಮುಖಂಡರು, ಆಡಳಿತ ಮಂಡಳಿ ಹಾಗೂ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿ, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಸುರೇಶ ವರ್ಮಾ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದರು. ಶಿಥಿಲಗೊಂಡಿರುವ ಕೊಠಡಿಗಳ ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳು ವುದರ ಜೊತೆಗೆ, ಹೊಸ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವುದಾಗಿ ಅಧಿಕಾರಿಗಳು ಲಿಖಿತ ಭರವಸೆ ನೀಡಿದರು. ಅಧಿಕಾರಿಗಳ ಸ್ಪಷ್ಟನೆ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.

ಈ ಸಂದರ್ಭದಲ್ಲಿ ಚನ್ನಬಸವ, ಮಲ್ಲಣ ಗೌಡ ವಿದ್ಯಾರ್ಥಿಗಳಾದ ಶ್ರೀಕಾಂತ್, ರವಿ, ಮಲ್ಲಿಕಾರ್ಜುನ, ಮೊಹಮದ್ ಅಕ್ತರ್,ಇಮ್ತಿಯಾಜ್, ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.---

06ಕೆಪಿಆರ್‌ಸಿಆರ್‌ 03: ರಾಯಚೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದಿರುವುದು.

06ಕೆಪಿಆರ್‌ಸಿಆರ್‌ 04: ರಾಯಚೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿಯ ಮೇಲ್ಛಾವಣಿ ಕುಸಿದಿರುವುದನ್ನು ಖಂಡಿಸಿ, ಹೊಸ ಕಟ್ಟಡ ನಿರ್ಮಿಸಲು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭೆಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ, ನಾಡಿದ್ದು ಜಿಲ್ಲಾ ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ
ಸೆ.1ಕ್ಕೆ ದೆಹಲಿ ಚಲೋ: ಸಿಪಿಐನಿಂದ ಜಾಗೃತಿ, ಪಾದಯಾತ್ರೆ