ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸರ್ಕಾರಿ ಬಸ್‌

KannadaprabhaNewsNetwork | Published : Oct 17, 2023 12:30 AM

ಸಾರಾಂಶ

ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಅರಸೀಕೆರೆಯಿಂದ ಹುಳಿಯಾರು ಕಡೆಗೆ ಹೋಗುತ್ತಿದ್ದ ಬಸ್ ಏಕಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದೆ
ಕನ್ನಡಪ್ರಭ ವಾರ್ತೆ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಅರಸೀಕೆರೆಯಿಂದ ಹುಳಿಯಾರು ಕಡೆಗೆ ಹೋಗುತ್ತಿದ್ದ ಬಸ್ ಏಕಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದೆ. ಇದರಿಂದ ಮನೆ ಮುಂಭಾಗದ ಗೋಡೆ ಕುಸಿದ್ದಿದ್ದು ಅದರ ಮೇಲಿದ್ದ ನೀರಿನ ಸಿಂಟೆಕ್ ಒಡೆದು ಹೋಗಿದೆ. ಡಿಕ್ಕಿರಭಸಕ್ಕೆ ಬಸ್‌ನ ಮುಂಭಾಗದ ಗಾಜು ಒಡೆದು ಜಖಂಗೊಂಡಿದೆ. ಬಸ್‌ನಲ್ಲಿದ್ದ ೪-೫ ಪ್ರಾಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸರು ಮತ್ತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Share this article