ನವಿಲುಕುರಿಕೆ ಗ್ರಾಮಕ್ಕೆ ಕೊನೆಗೂ ಬಂತು ಸರ್ಕಾರಿ ಬಸ್ಸು!

KannadaprabhaNewsNetwork |  
Published : Jan 04, 2024, 01:45 AM IST
ಬಸ್ ಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು | Kannada Prabha

ಸಾರಾಂಶ

ತಾಲೂಕಿನ ಸಿ.ಎನ್. ದುರ್ಗಾ ಹೋಬಳಿ ನವಿಲುಕುರಿಕೆ ಗ್ರಾಮಕ್ಕೆ ಶಾಸಕ ಡಾ.ಜಿ. ಪರಮೇಶ್ವರ ಆದೇಶದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್‌ನ ವ್ಯವಸ್ಥೆ ಕಲ್ಪಿಸಿದರು, ಗ್ರಾಮಕ್ಕೆ ಆಗಮಿಸಿದ ವೇಳೆ ಗ್ರಾಮಸ್ಥರು ಬಸ್‌ಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರೆ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿತ್ತು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ತಾಲೂಕಿನ ಸಿ.ಎನ್. ದುರ್ಗಾ ಹೋಬಳಿ ನವಿಲುಕುರಿಕೆ ಗ್ರಾಮಕ್ಕೆ ಶಾಸಕ ಡಾ.ಜಿ. ಪರಮೇಶ್ವರ ಆದೇಶದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್‌ನ ವ್ಯವಸ್ಥೆ ಕಲ್ಪಿಸಿದರು, ಗ್ರಾಮಕ್ಕೆ ಆಗಮಿಸಿದ ವೇಳೆ ಗ್ರಾಮಸ್ಥರು ಬಸ್‌ಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರೆ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿತ್ತು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಮಹತ್ವದ ಕಾರ್ಯಕ್ರಮದಲ್ಲಿ ಅಂದಿನ ತಹಸೀಲ್ದಾರ್ ನಹೀದಾ ಜಮ್‌ ಜಮ್ ಅವರಿಗೆ ನವಿಲುಕುರಿಕೆ ಗ್ರಾಮಸ್ಥರು ಬಸ್ ಸಮಸ್ಯೆಯ ಬಗ್ಗೆ ಮನವಿಯನ್ನು ಸಲ್ಲಿಸಿದರು. ಶಾಸಕರ ಗಮನಕ್ಕೆ ತಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಆದೇಶದ ಪತ್ರ ಬರೆದಿದ್ದರು. ತುಮಕೂರು ಸೇರಿದಂತೆ ಕೊರಟಗೆರೆ ಶಾಲೆ-ಕಾಲೇಜುಗಳಿಗೆ ನವಿಲುಕುರಿಕೆ ಗ್ರಾಮದಿಂದ ಪ್ರತಿದಿನ ಅನೇಕ ವಿದ್ಯಾರ್ಥಿಗಳು ಹೋಗುತ್ತಾರೆ. ಈ ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದ ಕಾರಣ ಮೈಲಿಗಟ್ಟಲೆ ನಡೆಯಬೇಕಾದ ಅನಿವಾರ್ಯತೆ ಎದುರಾಗಿತ್ತು, ವಿದ್ಯಾರ್ಥಿಗಳ ಮತ್ತು ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಅಂದು ನಡೆದ ಜಿಲ್ಲಾಧಿಕಾರಿಗಳ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಹಿನ್ನೆಲೆ ಸಾರಿಗೆ ಅಧಿಕಾರಿಗಳು ಸಚಿವ ಡಾ.ಜಿ. ಪರಮೇಶ್ವರ್ ಆದೇಶದಂತೆ ಸರ್ಕಾರಿ ಬಸ್ ಸೌಲಭ್ಯವನ್ನು ಕಲ್ಪಿಸಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಬಾಕ್ಸ್‌

ಕೃತಜ್ಞತೆ ತಿಳಿಸಿದ ಗ್ರಾಮಸ್ಥರು

ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರ ಮನವಿಯ ಮೆರೆಗೆ ಸರ್ಕಾರವು ಸಾರಿಗೆ ಇಲಾಖೆಗೆ ಬಸ್ಸಿ ವ್ಯವಸ್ಥೆ ಕಲ್ಪಿಸುವಂತೆ ಆದೇಶ ಮಾಡಿತ್ತು. ಸರ್ಕಾರದ ಆದೇಶದ ಅನ್ವಯ ಇಲಾಖೆಯು ನವಿಲುಕುರಿಕೆ, ದಮಗಲಯ್ಯನ ಪಾಳ್ಯ, ಜಿ. ನಾಗೇನಹಳ್ಳಿ, ಬುರುಗನಹಳ್ಳಿ, ಗೊರವನಹಳ್ಳಿ ಗ್ರಾಮಗಳಿಗೆ ಪ್ರತಿನಿತ್ಯ ಸಂಚರಿಸಲು ವಿಶೇಷ ಸಾರಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸಿದ್ದು ಗ್ರಾಮಸ್ಥರೆಲ್ಲರೂ ಬಸ್ಸಿಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ಸರ್ಕಾರಕ್ಕೆ ಮತ್ತು ಸ್ಥಳೀಯ ಶಾಸಕರಿಗೆ ವಿಶೇಷ ಕೃತಜ್ಞತೆಯನ್ನು ತಿಳಿಸಿದ್ದಾರೆ.ಕೋಟ್‌

ನಮ್ಮ ಹೋಬಳಿಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮ ನಡೆಯಿತು. ಆ ವೇಳೆ ತಹಸೀಲ್ದಾರ್ ನಾಹೀದಾ ಜಮ್‌ ಜಮ್ ಅವರಿಗೆ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಮನವಿಯನ್ನ ಸಲ್ಲಿಸಲಾಗಿತ್ತು, ಗೃಹಸಚಿವರಾದ ಡಾ.ಜಿ. ಪರಮೇಶ್ವರ್‌ ಅವರು ನಮ್ಮ ಸಮಸ್ಯೆಯನ್ನು ಅರಿತು ಇಂದು ಸಾರಿಗೆ ಬಸ್‌ನ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಿದ್ದಾರೆ, ಇಂತಹ ನಾಯಕರು ನಮ್ಮ ಕ್ಷೇತ್ರದಲ್ಲಿರುವುದು ನಮ್ಮ ಹೆಮ್ಮೆ.

ರಾಮಚಂದ್ರಯ್ಯ, ನವಿಲುಕುರಿಕೆ ಗ್ರಾಮಸ್ಥ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ