ಬಡವರನ್ನು ಸಮಾಜದ ಮುನ್ನಲೆಗೆ ತರಲು ಸರ್ಕಾರ ಬದ್ಧ : ಶಾಸಕ ತಮ್ಮಯ್ಯ

KannadaprabhaNewsNetwork |  
Published : Jun 05, 2025, 01:46 AM IST
ಗಂಗಾ ಕಲ್ಯಾಣ ಯೋಜನೆಯಡಿ ರೈತರ ಜಮೀನಿನಲ್ಲಿ ಬೋರ್‌ ವೆಲ್‌ ಕೊರೆಸುವ ಕಾರ್ಯಕ್ಕೆ ಹಳೇ ಲಕ್ಯಾ ಗ್ರಾಮದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಬುಧವಾರ ಚಾಲನೆ ನೀಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ ವೆಲ್‌ ಕೊರೆಸುವ ಕಾರ್ಯಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಹಳೇ ಲಕ್ಯಾ ಗ್ರಾಮದಲ್ಲಿ 2023-24 ಮತ್ತು 2024-25 ನೇ ಸಾಲಿನ ಒಟ್ಟು 47 ಫಲಾನುಭವಿಗಳ ಭೂಮಿಯಲ್ಲಿ ಗಂಗಾ ಕಲ್ಯಾಣ ಕಾರ್ಯಕ್ರಮದಡಿ ಬೋರ್‌ವೆಲ್‌ ಕೊರೆಯಲು ಬುಧವಾರ ಚಾಲನೆ ನೀಡಿ ಮಾತನಾಡಿದರು. ಹಿಂದೆ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗೆ ₹2.50 ಲಕ್ಷ ನೀಡುತ್ತಿದ್ದು, ಕೊಳವೆ ಬಾವಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ ರಾಜ್ಯ ಸರ್ಕಾರ ಇದನ್ನು ಮನಗಂಡು ₹3.75 ಲಕ್ಷಕ್ಕೆ ಹೆಚ್ಚಿಸಿದೆ ಎಂದ ಅವರು, ಫಲಾನು ಭವಿಗಳು ಗಂಗಾ ಕಲ್ಯಾಣ ಯೋಜನೆ ಸದುಪಯೋಗ ಪಡೆದುಕೊಂಡು ಉತ್ತಮ ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕೆಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ಶಿಕ್ಷಣ, ಆರೋಗ್ಯ, ಬಡವರಿಗೆ ಬದುಕುಕಟ್ಟಿ ಕೊಡಲು ಬದ್ಧವಾಗಿದೆ. ಇದಕ್ಕೆ ವಿದ್ಯಾರ್ಥಿ ಪೋಷಕರು ಹೆಚ್ಚು ಒತ್ತು ನೀಡಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಸರ್ಕಾರದ ಯೋಜನೆ ಫಲಪ್ರದವಾಗುತ್ತದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ ಹೆಚ್ಚು ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್ ಮಾತನಾಡಿ, ಪ್ರಸಕ್ತ ಸಾಲಿಗೆ ಗಂಗಾ ಕಲ್ಯಾಣಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ಜೂ.30 ಅಂತಿಮ ದಿನವಾಗಿದೆ. ಅಗತ್ಯ ಇರುವ ರೈತರು ಕೂಡಲೇ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಲಕ್ಯಾ ಗ್ರಾಪಂ ಅಧ್ಯಕ್ಷ ಹನೀಫ್, ಮಾಜಿ ಅಧ್ಯಕ್ಷ ನಾಗಣ್ಣ, ಸಿದ್ದೇಶ್, ಪುಟ್ಟೇಗೌಡ, ಸಂತೋಷ್, ಶಶಿ, ಕಾಂತರಾಜ್, ಕೆಂಗೇಗೌಡ, ಮಧು, ಸಿದ್ದೇಗೌಡ ಉಪಸ್ಥಿತರಿದ್ದರು.--- ಬಾಕ್ಸ್‌ -----ಕಾಗದ ರಹಿತ ಸೇವೆಗೆ ಉತ್ತೇಜನಚಿಕ್ಕಮಗಳೂರು: ಸರ್ಕಾರ ಪೇಪರ್‌ಲೆಸ್ ಸೇವೆ ಉತ್ತೇಜಿಸುವ ಉದ್ದೇಶದಿಂದ ರಾಜ್ಯದ ಕಂದಾಯ ಇಲಾಖೆ ಅಧಿಕಾರಿ ಗಳಿಗೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ತಾಲೂಕು ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ಲ್ಯಾಪ್‌ಟಾಪ್ ಪಡೆದುಕೊಂಡ ಕಂದಾಯ ಇಲಾಖೆ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳ ಬೇಕು. ಬೇರೆಯವರಿಗೆ ಲ್ಯಾಪ್‌ಟಾಪ್‌ ಕೊಡುವ ಮೂಲಕ ಸರ್ಕಾರದ ಅಗತ್ಯ ಮಾಹಿತಿಗಳು ಸೋರಿಕೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಇದುವರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಮೊಬೈಲ್‌ನಲ್ಲಿ ದಾಖಲೆ ಪತ್ರ ಸಿದ್ಧಪಡಿಸುವ ಮೂಲಕ ಸೇವೆ ಸಲ್ಲಿಸುತ್ತಿದ್ದರು. ಇದನ್ನರಿತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಠಾರಿಯಾ ಚರ್ಚಿಸಿ ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿಲು ನಿರ್ಧರಿಸಿದ್ದಾರೆ ಎಂದರು.

ತಹಸೀಲ್ದಾರ್ ರೇಷ್ಮಾ ಶೆಟ್ಟಿ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಬಗರ್ ಹುಕ್ಕುಂ, 1- 5 ಸೇರಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ಲ್ಯಾಪ್‌ಟಾಪ್‌ನಲ್ಲಿ ದಾಖಲು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್‌ (ಗ್ರೇಡ್‌ - 2) ರಾಮ್‌ ರಾವ್‌ ದೇಸಾಯಿ, ಶಿರಸ್ತೇದಾರ್ ಪ್ರಸನ್ನ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.

4 ಕೆಸಿಕೆಎಂ 5ಗಂಗಾ ಕಲ್ಯಾಣ ಯೋಜನೆಯಡಿ ರೈತರ ಜಮೀನಿನಲ್ಲಿ ಬೋರ್‌ ವೆಲ್‌ ಕೊರೆಸುವ ಕಾರ್ಯಕ್ಕೆ ಹಳೇ ಲಕ್ಯಾ ಗ್ರಾಮದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಬುಧವಾರ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ