ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧ: ಮಧು ಬಂಗಾರಪ್ಪ

KannadaprabhaNewsNetwork |  
Published : May 01, 2026, 02:15 AM IST
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಿರಸಿ ನಗರದ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಗೌರವಿಸಲಾಯಿತು. | Kannada Prabha

ಸಾರಾಂಶ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಿರಸಿ ನಗರದ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸನ್ಮಾನಿಸಿದರು.

ಶಿರಸಿ: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನಗರದ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸನ್ಮಾನಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಶಾಸಕ ಭೀಮಣ್ಣ ಟಿ. ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶ ಸೇವೆ ಮಾಡಲು ಕೈಜೋಡಿಸಬೇಕು. ನಮ್ಮ ಕ್ಷೇತ್ರದ ವಿದ್ಯಾರ್ಥಿಗಳು ಜ್ಞಾನವಂತರಾಗಿ ಹೊರಹೊಮ್ಮಬೇಕು. ಕೇವಲ ಅಂಕಗಳಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು. ಶಿರಸಿ ಸಿದ್ದಾಪುರ ಕ್ಷೇತ್ರದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ನಾನು ಸದಾ ಸಿದ್ಧ ಎಂದು ಭರವಸೆ ನೀಡಿದರು. ಆನಂತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಗಣ್ಯರು, ಮುಂದಿನ ಶೈಕ್ಷಣಿಕ ಹಂತದಲ್ಲಿ ಸರಿಯಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಮತ್ತು ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗುವಂತೆ ಸಲಹೆ ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಶಿಷ್ಯ ಸಂಬಂಧ ಕೃಷ್ಣಾರ್ಜುನರಂತಿರಲಿ: ಡಾ.ಶ್ರೀಧರ ಪೈ
ಆರೋಗ್ಯ ಇಲಾಖೆಗೆ ಕೆಬಿಎಲ್‌ 3 ವಾಹನ ಹಸ್ತಾಂತರ