ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಸಿಎಂ ಡಿ.ಕೆ.ಶಿವಕುಮಾರ್‌

KannadaprabhaNewsNetwork |  
Published : Oct 01, 2026, 02:00 AM IST
ಶಿವಕುಮಾರ್ | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇಡೀ ಸರ್ಕಾರ ಚಾಮರಾಜನಗರ ಜನತೆಯ ಜೊತೆಗಿದೆ. ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಈ ಜಿಲ್ಲೆಗೆ ೩ ಸಾವಿರ ಕೋಟಿ ರೂ.ಗಳ ಕಾಮಗಾರಿಯನ್ನು ನೀಡಿ, ಜಿಲ್ಲೆಯ ಜನರನ್ನು ಅಭಿವೃದ್ಧಿಯ ಪಥಕ್ಕೆ ಕರೆದೊಯ್ಯಲಾಗಿತ್ತು. ಜನರಿಂದ ಅಧಿಕಾರಕ್ಕೆ ಬಂದ ನಮ್ಮ ಗ್ಯಾರಂಟಿ ಸರ್ಕಾರ, ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಶಂಕುಸ್ಥಾಪನೆ ನೆರವೇರಿಸಿದೆ. ನಮ್ಮ ಮಂತ್ರಿಗಳು, ಸಂಸದರು, ಶಾಸಕರು ಸೇರಿದಂತೆ ಇಡೀ ಸರ್ಕಾರ ನಿಮ್ಮೊಂದಿಗಿದೆ. ಟೀಕೆ ಎದುರಿಸಿ ಗೆದ್ದರೆ ನಾಯಕನಾಗುತ್ತಾನೆ. ಸೋತರೆ ಮಾರ್ಗದರ್ಶಕನಾಗುತ್ತಾನೆ. ಈ ಭಾಗದ ಎಲ್ಲಾ ಜನಪ್ರತಿನಿಧಿಗಳು ಕ್ಷೇತ್ರದ ಹಾಗೂ ಜನರ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ನಿಮಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬಲು ಸೇವೆ ಮಾಡುತ್ತಿದ್ದಾರೆ ಎಂದರು.

ಶಿವನು ಗಂಗೆಗೆ ತನ್ನ ತಲೆಯ ಮೇಲೆ ಸ್ಥಾನ ನೀಡಿದ್ದರೆ, ಕಾಂಗ್ರೆಸ್ ಸರಕಾರ ಜನರ ಹೃದಯಗಳಲ್ಲಿ ಸ್ಥಾನ ಪಡೆದಿದೆ. ಕೊಳ್ಳೆಗಾಲಕ್ಕೆ ಒಳ್ಳೆಯ ಕಾಲ ಬಂದಿದೆ. ಕೊಳ್ಳೇಗಾಲಕ್ಕೆ ಅಭಿವೃದ್ಧಿ ಕಾಲಿಟ್ಟಿದೆ. ಹನೂರಿಗೆ ಅಭಿವೃದ್ಧಿ ಹರಿಯುತ್ತಿದೆ. ಕೊಳ್ಳೆಗಾಲದಲ್ಲಿ ರೇಷ್ಮೆ ಪಾರಂಪರಿಕ ವೃತ್ತಿಯಾಗಿದೆ. ನಾನು ಕೂಡ ರೇಷ್ಮೆ ನಾಡಿನಿಂದ ಬಂದವನು. ಕನಕಪುರ, ರಾಮನಗರ, ಮಾಗಡಿ, ಕೊಳ್ಳೇಗಾಲ, ಮಳವಳ್ಳಿ, ಹನೂರು, ಶಿಡ್ಲಘಟ್ಟ ಗಳಲ್ಲಿ ಅತಿ ಹೆಚ್ಚು ರೇಷ್ಮೆ ಬೆಳೆಯಲಾಗುತ್ತಿದೆ. ಮೈಸೂರು ಸಿಲ್ಕ್ ಪ್ರಸಿದ್ಧ ಬ್ರಾಂಡ್. ಟಿಪ್ಪುಸುಲ್ತಾನ್ ಅವರು ನಾಡಿಗೆ ರೇ? ಪರಿಚಯಿಸಿದರು. ಪ್ರಸ್ತುತ ಬಳ್ಳಾರಿ, ಹಾವೇರಿ, ಗದಗ ಸೇರಿದಂತೆ ವಿವಿಧೆಡೆ ರೇಷ್ಮೆ ಬೆಳೆಯಲಾಗುತ್ತಿದೆ. ಚೈನಾದಿಂದ ರೇಷ್ಮೆ ಆಮದು ನಿಂತ ಮೇಲೆ, ನಮ್ಮ ರೇಷ್ಮೆಗೆ ಉತ್ತಮ ಬೆಲೆ ದೊರೆಯುತ್ತಿದೆ. ಇದನ್ನು ಶಾಶ್ವತವಾಗಿ ಉಳಿಸಲು ಮಂಗಳೂರಿನ ಸಂಪುಟ ಸಭೆಯಲ್ಲಿ ಕೈಮಗ್ಗ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಲು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ನಿಮ್ಮೆಲ್ಲರ ಬದುಕಿಗೆ ಹೊಸ ರೂಪ ನೀಡುವ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ರಾಜ್ಯ ಹೊಸ ರೂಪಕ್ಕೆ ಹೆಜ್ಜೆ ಇಟ್ಟಿದೆ. ಇಂದು ಸುವರ್ಣಾವತಿ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ೧೨೦ ಕೋಟಿ ಕಾಮಗಾರಿಗೆ ಕಾರ್ಯದೇಶ ನೀಡಲಾಗಿದೆ. ಹನೂರಿನಲ್ಲಿ ಅಂತರ್ಜಲ ಅಭಿವೃಧ್ಧಿಗೆ ಸೂಕ್ತ ಅನುದಾನ ನೀಡಲಾಗಿದೆ. ಚಾಮರಾಜನಗರದ ಬಳಿ ಕಾಲುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗುಂಡ್ಲುಪೇಟೆ ತಾಲ್ಲೂಕಿಗೆ ೪೫೦ ಕೋಟಿ ವೆಚ್ಚದಲ್ಲಿ ನೀರಾವರಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ೧೦೦೦ ಕೋಟಿ ರೂ.ಗಳ ನೀರಾವರಿ ಕಾಮಗಾರಿಗಳನ್ನು ನೀಡಲಾಗಿದ್ದು, ನನ್ನ ಅವಧಿಯಲ್ಲಿ ಇಷ್ಟು ದೊಡ್ಡ ಅಭಿವೃದ್ಧಿಯನ್ನು ಜಿಲ್ಲೆ ಕಾಣುತ್ತಿದೆ. ಅಲ್ಪಸಂಖ್ಯಾತರು ಹಾಗೂ ಬುಡಕಟ್ಟು ಜನಾಂಗದವರ ಆಹಾರ ಕಿಟ್‌ಗಳ ಬೇಡಿಕೆಗಳನ್ನು ಪರಿಗಣಿಸಲು ನನ್ನ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಜ್, ವಕ್ಸ್ ಸಚಿವರಾದ ಯು.ಟಿ. ಖಾದರ್, ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಸಿಂಗ್, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಚೆಲುವರಾಯಸ್ವಾಮಿ, ಲೋಕಸಭಾ ಸದಸ್ಯ ಸುನೀಲ್ ಬೋಸ್, ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಡಾ. ಡಿ. ತಿಮ್ಮಯ್ಯ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ನರೇಂದ್ರ, ಮಾಜಿ ಶಾಸಕರಾದ ಆರ್. ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿಗಳು ಸಚಿವರೊಂದಿಗೆ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಬದಿ ಕಸ ಎಸೆದವರಿಗೆ ಪಾಲಿಕೆ ಪಾಠ!
ಸಚಿವ ಜೋಶಿ ಕುಟುಂಬದ ಕುರಿತ ಹೇಳಿಕೆಗೆ ರೈತ ಹೋರಾಟಗಾರ ವಿಷಾದ