ಧಾರವಾಡ:
ಜಿಲ್ಲಾಡಳಿತದಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಅವರು, ಧಾರವಾಡ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಒಟ್ಟು ₹ 20 ಕೋಟಿ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ವಿಪತ್ತು ಉಂಟಾದರೆ, ಸಮರ್ಥವಾಗಿ ನಿರ್ವಹಿಸಲು ಅಗತ್ಯ ಅನುದಾನವನ್ನು ಸರ್ಕಾರ ನೀಡಿದ್ದು, ಜಿಲ್ಲಾಡಳಿತದ ಬಳಿ ಜಮೆ ಇದೆ ಎಂದ ಸಚಿವರು, ಜನರ ಸಮಸ್ಯೆ ಬಗೆಹರಿಸಲು ಜನಸ್ಪಂದನಾ ಕಾರ್ಯಕ್ರಮ ನಡೆಸಲಾಗಿದೆ ಮತ್ತು ಗ್ಯಾರಂಟಿ ಯೋಜನೆಗಳ ಸಮಾವೇಶ ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.
ಅಹಿಂಸಾ ಮಾರ್ಗದಲ್ಲಿಯೇ ಸ್ವಾತಂತ್ರ್ಯ ಪಡೆದುಕೊಳ್ಳಬೇಕೆಂಬ ಮಹಾತ್ಮ ಗಾಂಧೀಜಿ ಹೋರಾಟಕ್ಕೆ ಈ ಭಾಗದ ಮೈಲಾರ ಮಹದೇವಪ್ಪ, ಆರ್.ಆರ್. ದಿವಾಕರ, ಉಮಾಬಾಯಿ ಕುಂದಾಪುರ, ಎನ್.ಎಸ್. ಹರಡೀಕರ, ಕೆ.ಎಫ್. ಪಾಟೀಲ, ಗೋವಿಂದಾಚಾರ್ಯ ಅಗ್ನಿಹೋತ್ರಿ, ನರಸಿಂಹ ದಾಬಡೆ ಮೊದಲಾದ ನೇತಾರರು ಕೈ ಜೋಡಿಸಿದ್ದರು ಎಂದು ಸ್ಮರಿಸಿದ ಸಚಿವರು, ಸರ್. ಸಿದ್ದಪ್ಪ ಕಂಬಳಿ, ಡೆಪ್ಯೂಟಿ ಚೆನ್ನಬಸಪ್ಪ, ಅರಟಾಳ ರುದ್ರಗೌಡರು ಈ ಭಾಗದ ಶಿಕ್ಷಣ ಮತ್ತು ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಿಸಬೇಕೆಂದರು.ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಎಸ್. ಪಾಟೀಲ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಎಚ್‌ಒ ಡಾ. ಶಶಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿದ್ದರು.