ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗದ ರಂಗಾಯಣದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪಿ. ಲಂಕೇಶ್ ಬಯಲು ರಂಗಮಂದಿರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಕಳೆದ 25-30 ವರ್ಷಗಳಿಂದ ಶಾಲಾ ಪಠ್ಯದಲ್ಲಿ ಇಲ್ಲದ ''''''''ನೈತಿಕ ವಿಜ್ಞಾನ'''''''' ವಿಷಯವನ್ನು 1 ರಿಂದ 10ನೇ ತರಗತಿಯವರೆಗೆ ಈ ವರ್ಷದಿಂದಲೇ ಪರಿಚಯಿಸಲಾಗುತ್ತಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.
ಸಾಂಸ್ಕೃತಿಕ ಕೆಪಿಎಸ್ ಶಾಲೆಗಳು: ಮೈಸೂರಿನಲ್ಲಿ ಕಲೆ ಮತ್ತು ಸಂಸ್ಕೃತಿಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ''''''''ಕಲೆ ಕರ್ನಾಟಕ ಪಬ್ಲಿಕ್ ಶಾಲೆ'''''''' (KPS) ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿನ ಹಾಸ್ಟೆಲ್ ವ್ಯವಸ್ಥೆಯಡಿ ಪ್ರತಿಭಾವಂತ ಮಕ್ಕಳಿಗೆ ರಂಗಭೂಮಿ, ಸಂಗೀತ ಮತ್ತು ಜಾನಪದ ಕಲೆಗಳ ತರಬೇತಿ ನೀಡಲಾಗುವುದು ಎಂದರು.ಶಿಕ್ಷಕರ ನೇಮಕಾತಿ: ಇಲಾಖೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಂಗ ಶಿಕ್ಷಕರನ್ನು ಅತಿಥಿ ಶಿಕ್ಷಕರ ಮಾದರಿಯಲ್ಲಿ ನೇಮಿಸಿಕೊಳ್ಳುವ ಬಗ್ಗೆಯೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಇಂದಿನ ರೀಲ್ಸ್ ಮತ್ತು ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ಮಕ್ಕಳು ದಾರಿ ತಪ್ಪದಂತೆ ತಡೆಯಲು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು, ರಂಗ ಶಿಕ್ಷಣಕ್ಕೆ ಉತ್ತೇಜಿಸಿ ಅನುಷ್ಠಾನ ಮಾಡಬೇಕಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ.ಮಂಜುನಾಥ್ ಸ್ವಾಮಿ ಬಿ.ಎಸ್ ಮಾತನಾಡಿ, ಯಾವುದೇ ನಾಡಿನ ನಿಜವಾದ ಶ್ರೀಮಂತಿಕೆ ಅಲ್ಲಿನ ಪ್ರಕೃತಿ ಮತ್ತು ಸಂಸ್ಕೃತಿಯಲ್ಲಿ ಅಡಗಿರುತ್ತದೆ. ಇಂತಹ ಸಂಸ್ಕೃತಿಯನ್ನು ಪೋಷಿಸಿ ಬೆಳೆಸುವಲ್ಲಿ ಶಿವಮೊಗ್ಗ ರಂಗಾಯಣದ ಕೊಡುಗೆ ಅಪಾರವಾಗಿದ್ದು, ನೂತನ ಪಿ.ಲಂಕೇಶ್ ಅವರ ಹೆಸರಿನ ಬಯಲು ರಂಗಮಂದಿರದಲ್ಲಿ ಇರುವ ಸೌಲಭ್ಯಗಳು ರಂಗಚಟುವಟಿಕೆಗಳಿಗೆ ಮತ್ತಷ್ಟು ಶಕ್ತಿ ತುಂಬಲಿವೆ. ರಂಗಭೂಮಿಯು ಕೇವಲ ಮನರಂಜನೆಯಲ್ಲ, ಅದು ಸಮಾಜದಲ್ಲಿ ಭಾವೈಕ್ಯತೆಯನ್ನು ಮೂಡಿಸುವ ಪ್ರಬಲ ಮಾಧ್ಯಮವಾಗಿದೆ. ವಿಶೇಷವಾಗಿ ಯುವ ಪೀಳಿಗೆಗೆ ರಂಗಭೂಮಿಯ ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.
ರಾಜ್ಯದ ಆರು ರಂಗಾಯಣಗಳಲ್ಲಿ ಶಿವಮೊಗ್ಗ ರಂಗಾಯಣವು ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. ಮೈಸೂರು ರಂಗಾಯಣದ ಮಾದರಿಯಲ್ಲಿಯೇ ಶಿವಮೊಗ್ಗ ರಂಗಾಯಣವು ಜನರಿಗೆ ನಾಟಕಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗುತ್ತಿದೆ.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ, ರಂಗಾಯಣ ಮಾಜಿ ನಿರ್ದೇಶಕರಾದ ಸಂದೇಶ್ ಜವಳಿ, ಎಂ.ಗಣೇಶ್, ಇಕ್ಬಾಲ್ ಅಹ್ಮದ್, ಮಲ್ಲಿಕಾರ್ಜುನ ಕಡಕೋಳ, ಚಂದ್ರೇಗೌಡರು, ಕಾಂತೇಶ್ ಕದರಮಂಡಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ, ರಂಗ ಸಮಾಜದ ಸದಸ್ಯರು ಹಾಜರಿದ್ದರು.