ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಆದರೆ ಇತ್ತೀಚೆಗೆ ಇಬ್ಬರ ನಡುವೆ ವಿರಸ ಉಂಟಾಗಿತ್ತು. ಹೀಗಾಗಿ ನಿತ್ಯವೂ ಗಂಡ ಹೆಂಡತಿ ನಡುವೆ ಜಗಳ ಆಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಡಾ. ಗೀತಾ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಾವಿನ ಸುದ್ದಿ ತಿಳಿದು ಗೀತಾ ಕುಟುಂಬಸ್ಥರು ಹುಲಕೋಟಿಗೆ ದೌಡಾಯಿಸಿದ್ದಾರೆ. ಮಗಳ ಸಾವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಮಗಳ ಸಾವಿಗೆ ಪತಿ ಡಾ. ಕುಶಾಲ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ಈ ಕುರಿತು ಗದಗ ಗ್ರಾಮೀಣ ಪೊಲೀಸರು ತನಿಖೆ ನಡೆಸಿದ್ದಾರೆ.