ಕನ್ನಡಪ್ರಭ ವಾರ್ತೆ ಮಂಡ್ಯ
ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಐಷಾರಾಮಿ ಕಾರುಗಳ ಖರೀದಿಗೆ, ತೆಲಂಗಾಣದ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇದೀಗ ವಾಲ್ಮೀಕಿ ಜಯಂತಿಯನ್ನು ಯಾವ ಪುರುಷಾರ್ಥಕ್ಕಾಗಿ ಆಚರಿಸುತ್ತಿದ್ದಾರೆ ಎಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಮೈಸೂರಿನ ಮುಡಾದಲ್ಲಿ 14 ನಿವೇಶನಗಳನ್ನು ಪಡೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮ ಎಸಗಿದ್ದು, ವಿರೋಧ ಪಕ್ಷಗಳ ವಿರೋಧದ ನಂತರ ವಾಪಸ್ಸು ಕೊಟ್ಟು ಶುದ್ಧ ಹಸ್ತರು, 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯೂ ಇಲ್ಲ ಎಂದು ತೋರ್ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.ರಾಜಕೀಯದಲ್ಲಿ ನನ್ನಂತಹ ನಾಯಕನಿಲ್ಲ. ದೇವರಾಜ ಅರಸು ಅವರಂತೆ ನಾನು ಎಂದು ಸ್ವಯಂ ಅಹಿಂದ ನಾಯಕರಾಗಿ ಘೋಷಿಸಿಕೊಳ್ಳುತ್ತಿದ್ದಾರೆ. ನಿಜವಾಗಿಯೂ ಅವರಿಗೆ ನೈತಿಕತೆ ಇದ್ದರೆ ದಲಿತರು ಮತ್ತು ವಾಲ್ಮೀಕಿ ಸಮುದಾಯದ ಉದ್ದಾರಕ್ಕೆ ಯೋಜನೆ ರೂಪಿಸಬೇಕಿತ್ತು. ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರವೇ ನಮ್ಮ ಕಣ್ಣ ಮುಂದೆ ಇರುವಾಗ ಆ ಸಮುದಾಯಗಳಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಎಂದು ದೂರಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಉದ್ಯೋಗ ಮೇಳ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಉದ್ಯೋಗದ ಅವಶ್ಯಕತೆ ಇದೆ. ಹಾಗಾಗಿ ನಿರುದ್ಯೋಗಿಗಳಿಗೆ ಅನುಕೂಲವಾಗುತ್ತದೆ. ಯಾರಿಗೆ ಉದ್ಯೋಗದ ಅವಶ್ಯಕತೆ ಇದೆ ಅವರು ಈ ಮೇಳದಲ್ಲಿ ಭಾಗವಹಿಸಬಹುದು ಎಂದರು.