ಹೊಸಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಅವರಿಗೆ ಸಂಬಂಧಿಸದ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ನಾರಾಯಣಸ್ವಾಮಿ ಆಗ್ರಹಿಸಿದರು.
ಅಧಿಕಾರಿಗಳಿಗೆ ಬೆದರಿಕೆ: ಹಿಂದಿನ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಉನ್ನತ ಹುದ್ದೆಯಲ್ಲಿರುವವರ ವಿರುದ್ಧ ದೂರು ಸಲ್ಲಿಸಿ ಶಿಕ್ಷೆಗೆ ಒಳಪಡಿಸಿದ್ದೇನೆ, ಅದೇ ರೀತಿ ನಿನ್ನ ಮೇಲೂ ದೂರು ದಾಖಲಿಸಿ ಶಿಕ್ಷೆ ಕೊಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಹಾಗೂ ಸರ್ಕಾರ ನನಗೆ ಗನ್ ಮ್ಯಾನ್ ನೀಡಿದೆ ಎಂದು ಬೆದರಿಸುವ ಈ ವ್ಯಕ್ತಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸುತ್ತಿದ್ದಾನೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಫೋಟೋ: 22 ಹೆಚ್‌ಎಸ್‌ಕೆ 2ಹೊಸಕೋಟೆಯಲ್ಲಿ ಸರ್ಕಾರಿ ನೌಕರರ ಸಂಘದಿಂದ ಆರ್‌ಟಿಐ ಕಾರ್ಯಕರ್ತ ಎಸ್.ನಾರಾಯಣಸ್ವಾಮಿ ಸರ್ಕಾರಿ ನೌಕರರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಸಂಘದ ಅಧ್ಯಕ್ಷ ಡಾ ಸಿ.ಎನ್ ನಾರಾಯಣಸ್ವಾಮಿ ನೇತೃತ್ವದಲ್ಲಿ ತಹಸೀಲ್ದಾರ್ ಸೋಮಶೇಖರ್‌ಗೆ ಮನವಿ ಸಲ್ಲಿಸಿದರು.