ಡಿಎಫ್‌ಒ ಯೋಗೇಶ ಸಿ.ಕೆ. ಮಾತನಾಡಿ, ಸರ್ಕಾರಿ ನೌಕರರು ವೈಯಕ್ತಿಕ ಸಮಸ್ಯೆ ಮತ್ತು ಕುಟುಂಬದ ಆರೋಗ್ಯವನ್ನು ಲೆಕ್ಕಿಸದೇ ಸೇವೆ ಮಾಡುತ್ತಾರೆ. ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದರು.
ಹೊನ್ನಾವರ: ಸರ್ಕಾರಿ ನೌಕರರು ಸಾರ್ವಜನಿಕರಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ಜತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿಯನ್ನು ವಹಿಸಬೇಕು ಎಂದು ತಹಸೀಲ್ದಾರ್ ಪ್ರವೀಣ ಕರಾಂಡೆ ಹೇಳಿದರು.
ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮತ್ತು ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸಾಧನೆ ಮಾಡಿದ ನೌಕರರನ್ನು ಗುರುತಿಸಿ ಗೌರವಿಸುತ್ತಿರುವುದು ಒಳ್ಳೆಯ ಕಾರ್ಯವಾಗಿದೆ ಎಂದರು. ಡಿಎಫ್‌ಒ ಯೋಗೇಶ ಸಿ.ಕೆ. ಮಾತನಾಡಿ, ಸರ್ಕಾರಿ ನೌಕರರು ವೈಯಕ್ತಿಕ ಸಮಸ್ಯೆ ಮತ್ತು ಕುಟುಂಬದ ಆರೋಗ್ಯವನ್ನು ಲೆಕ್ಕಿಸದೇ ಸೇವೆ ಮಾಡುತ್ತಾರೆ. ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಅಣ್ಣಪ್ಪ ಮುಕ್ರಿ ಮಾತನಾಡಿ, ಸರ್ಕಾರಿ ನೌಕರರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದೇವೆ. ಉತ್ತಮ ಕೆಲಸ ಮಾಡಲು ಎಲ್ಲರ ಸಹಕಾರ ಅಗತ್ಯ ಎಂದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನವೀನ ಕೋಪರ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಗಿರೀಶ ನಾಯ್ಕ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿದರು. ನಿವೃತ್ತ ಸರ್ಕಾರಿ ನೌಕರರು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೌಕರರು ಹಾಗೂ ನೌಕರರ ಮಕ್ಕಳನ್ನು ಗೌರವಿಸಲಾಯಿತು. ಸಾರಿಗೆ ಅಧಿಕಾರಿ ರವೀಂದ್ರ ಕೆ.ಎಸ್., ಸಹಾಯಕ ಕೃಷಿ ನಿರ್ದೇಶಕಿ ಪುನೀತಾ ಎಸ್.ಬಿ., ಕೆ.ಕೆ. ಗಣಪತಿ, ಸಂಘದ ಖಜಾಂಚಿ ನಾಗಪ್ಪ ಕೋಟೂರ, ರಘುನಾಥ ನಾಯ್ಕ ಇದ್ದರು. ಶಿಕ್ಷಕರ ಸಂಘದ ಅಧ್ಯಕ್ಷ ಸುಧೀಶ ನಾಯ್ಕ ಸ್ವಾಗತಿಸಿದರು. ಕಿಶೋರ ನಾಯ್ಕ ವಂದಿಸಿದರು. ಪ್ರಕಾಶ ನಾಯ್ಕ ನಿರ್ವಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.