ಸರ್ಕಾರಿ ನೌಕರರು ನೋಂದವರ ಕಣ್ಣೀರು ಒರೆಸಿ

KannadaprabhaNewsNetwork |  
Published : Jan 05, 2025, 01:32 AM IST
ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಭವನದಲ್ಲಿ ಲಕ್ಷ್ಮೇಶ್ವರ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹೂವಿನ ಶಿಗ್ಲಿಯ ಚನ್ನವೀರ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ನೌಕರರ ಸಂಘದ ಕಾರ್ಯಗಳು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಎಲ್ಲರೂ ಮಾಡಬೇಕು

ಲಕ್ಷ್ಮೇಶ್ವರ: ಸರ್ಕಾರಿ ನೌಕರರು ತಮ್ಮಲ್ಲಿಗೆ ಬರುವ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೂವಿನ ಶಿಗ್ಲಿಯ ವಿರಕ್ತ ಮಠದ ಪೀಠಾಧಿಪತಿ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಭವನದಲ್ಲಿ ಶನಿವಾರ ನಡೆದ ಲಕ್ಷ್ಮೇಶ್ವರ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸರ್ಕಾರಿ ನೌಕರರ ಸಂಘಟನೆಯು ಸಮಾಜದ ಸುಧಾರಣೆಗೆ ತಮ್ಮದೆ ಆದ ಸಹಾಯ‌ ಸಹಕಾರ ನೀಡುವ ಮೂಲಕ ನೋಂದರ ಕಣ್ಣೀರು ಒರೆಸುವ ಕಾರ್ಯ ಮಾಡಬೇಕು. ನೌಕರರ ಸಂಘಟನೆಗಳು ಸರ್ಕಾರದಿಂದ ಅನುಷ್ಠಾನಗೊಳಿಸುವ

ಕಾರ್ಯಸೂಚಿ ಹಾಗೂ ಯೋಜನೆ ಜಾರಿಗೆ ತಲುಪಿಸುವ ಕಾರ್ಯ ಮಾಡಬೇಕು.ನೌಕರರ ಸಂಘದ ಕಾರ್ಯಗಳು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳುವ ಕಾರ್ಯವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ, ಸರ್ಕಾರಿ ನೌಕರರು ಜವಾಬ್ದಾರಿಯುತವಾಗಿ ನಡೆದುಕೊಂಡು ಸರ್ಕಾರದ ಜನಪರ ಕೆಲಸ ಅಚ್ಚುಕಟ್ಟಾಗಿ ಮಾಡಬೇಕು ಎಂದು ಹೇಳಿದರು.

ಈ ವೇಳೆ ಬಿಇಓ ನಾಯಕಿ ನಾಯಕ್, ಮಾಜಿ ಶಾಸಕ ರಾಮಣ್ಣ ಲಮಾಣಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ರವಿ ಗುಂಜಿಕರ ಸಂಘದ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿ ನಡೆದುಕೊಂಡು ಹೋಗಲಿ ಎಂದು ಹೇಳಿದರು.

ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ, ಬಿ.ಎಸ್. ಹರ್ಲಾಪೂರ. ಡಿ.ಎಚ್. ಪಾಟೀಲ, ಡಾ. ಪ್ರವೀಣ ಸಜ್ಜನರ ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರು ಮತ್ತು ನೌಕರು ಇದ್ದರು.

ಈ ವೇಳೆ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಗುರುರಾಜ ಹವಳದ ಸ್ವಾಗತಿಸಿದರು. ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಎಚ್. ನಿಂಗರೆಡ್ಡಿ ನಿರೂಪಿಸಿದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!