ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂ.ಗ್ರಾ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.
ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದ್ದರೆ ಅಥವಾ ಕೇಸ್ ದಾಖಲಿಸಿದ್ದರೆ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಸುಳ್ಳು ಕೇಸ್ ಗಳಿಂದ ನಿಜ ಕೇಸ್‌ಗಳು ವಿಳಂಬವಾಗುತ್ತಿವೆ. ಇದರಿಂದ ನಿಷ್ಠಾವಂತ ಅಧಿಕಾರಿಗಳು ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿವೆ. ಸುಳ್ಳು ಕೇಸ್ ಹಾಕಿದವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ನೀಡಲಾಗುತ್ತದೆ. ಸುಳ್ಳು ಕೇಸ್ ಹಾಕಿದವರಿಗೆ ಆರು ತಿಂಗಳು 3 ವರ್ಷ ಅಥವಾ 5 ವರ್ಷದವರೆಗೆ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದರು.
ದೊಡ್ಡಬಳ್ಳಾಪುರದ ಕೆಲವು ಕೆರೆಗಳಿಗೆ ಕಸ ತಂದು ಸುರಿಯುತ್ತಿರುವುದು ಮಾಲಿನ್ಯ ಉಂಟಾಗಿ ಸುತ್ತ ಮುತ್ತಲಿನ ಹಳ್ಳಿಗಳಿಗೆ, ಕೆರೆಗೆ, ಪರಿಸರಕ್ಕೆ ಹಾನಿ ಉಂಟಾಗಿದೆ. ಯಾಕೆ ಇದುವರೆಗೆ ಕ್ರಮ ಆಗಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಫೋಟೋ-13ಕೆಡಿಬಿಪಿ1- ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.