.ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು

KannadaprabhaNewsNetwork |  
Published : Sep 05, 2024, 12:36 AM IST
೪ಕೆಎಲ್‌ಆರ್-೩ಕೋಲಾರದ ಹೊರವಲಯದ ಮೌಲಾನಾ ಆಜಾದ್ ಭವನದಲ್ಲಿ ಅಲ್ಪಸಂಖ್ಯಾತರ ಮಹಿಳಾ ಸರ್ಕಾರೇತರ ಸಂಸ್ಥೆ ಮತ್ತು ಪ್ರತಿಷ್ಠಿತ ಮಹಿಳಾ ಸಮಾಜ ಸೇವಕರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸ್ಸಾರ್ ಅಹಮ್ಮದ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಅಲ್ಪಸಂಖ್ಯಾತರಿಗಾಗಿ ಲಭ್ಯವಿರುವ ಯೋಜನೆಗಳ ಮತ್ತು ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯಲ್ಲಿ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ವಿವರ ಲಭ್ಯವಿರುತ್ತದೆ. ನೀವು ಕಾಳಜಿ ವಹಿಸಿ ಇಂತಹ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೋಲಾರಸರ್ಕಾರವು ಅಲ್ಪಸಂಖ್ಯಾತರಿಗಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸ್ಸಾರ್ ಅಹಮ್ಮದ್ ತಿಳಿಸಿದರು. ನಗರದ ಹೊರವಲಯದ ಮೌಲಾನಾ ಆಜಾದ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಮಹಿಳಾ ಸರ್ಕಾರೇತರ ಸಂಸ್ಥೆ ಮತ್ತು ಪ್ರತಿಷ್ಠಿತ ಮಹಿಳಾ ಸಮಾಜ ಸೇವಕರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸೌಲಭ್ಯಗಳ ಮಾಹಿತಿ ಪಡೆಯಿರಿ

ಅಲ್ಪಸಂಖ್ಯಾತರೆಂದರೆ ಕೇವಲ ಇಸ್ಲಾಂ ಧರ್ಮದವರಲ್ಲದೇ ಕ್ರಿಶ್ಚಿಯನ್, ಬೌಧ್ದ, ಪಾರ್ಸಿ, ಜೈನ ಮುಂತಾದ ಹಲವು ಸಮುದಾಯಗಳು ಸೇರಿವೆ, ಅಲ್ಪಸಂಖ್ಯಾತರಿಗಾಗಿ ಲಭ್ಯವಿರುವ ಯೋಜನೆಗಳ ಮತ್ತು ಸೌಲಭ್ಯಗಳ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಯಲ್ಲಿ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ವಿವರ ಲಭ್ಯವಿರುತ್ತದೆ. ನೀವು ಕಾಳಜಿ ವಹಿಸಿ ಇಂತಹ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಗಾಗಿ ೧೮೧ ಸಹಾಯವಾಣಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮೇಲ್ಕಂಡ ಸ್ಥಳಗಳಲ್ಲಿ ಸೌಲಭ್ಯ ಪಡೆಯಲು ಅಗತ್ಯ ದಾಖಲೆಗಳಾದ ಅಧಾರ್, ವೋಟರ್ ಐಡಿ, ಹಿರಿಯ ನಾಗರೀಕರ ಗುರುತಿನ ಚೀಟಿ, ಬಿ.ಪಿ.ಎಲ್ ಪಡಿತರ ಚೀಟಿ, ಯಶಸ್ವಿನಿ ಆಯೋಗ್ಯ ಕಾರ್ಡ್, ಕಟ್ಟಣ ನಿರ್ಮಾಣ ಕಾರ್ಮಿಕರ ಇ-ಶ್ರಮ್ ಕಾರ್ಡ್ ಮುಂತಾದ ಅತ್ಯಗತ್ಯ ದಾಖಲೆಗಳನ್ನು ಸಿದ್ಧ ಮಾಡಿ ಇಟ್ಟುಕೊಳ್ಳಬೇಕು ಎಂದರು. ಯೋಜನೆಗಳ ಅರಿವು ಮೂಡಿಸಬೇಕು

ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜಿಲ್ಲೆಯ ಜನತೆಗೆ ಸರ್ಕಾರಿ ಸೌಲಭ್ಯಗಳನ್ನು ಕುರಿತು ಅಲ್ಪಸಂಖ್ಯಾತರ ಸಮುದಾಯಕ್ಕೆ ಲಭ್ಯವಾಗಬೇಕಾದ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಅರಿವು ಮೂಡಿಸಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದೆ. ಮಾಹಿತಿ ಕೇಂದ್ರಗಳ ಸದುಪಯೋಗ ಸಮುದಾಯವು ಪಡೆದುಕೊಳ್ಳಬೇಕು ಎಂದರು.

ಹಲವಾರು ವಿದ್ಯಾರ್ಥಿವೇತನ ಯೋಜನೆಗಳು ಜಾರಿಯಲ್ಲಿದ್ದು, ಪ್ರತಿಯೊಬ್ಬರೂ ಸಾಕ್ಷರರಾಗಲು ಸರ್ಕಾರವು ವಿದ್ಯಾರ್ಥಿವೇತನ, ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಶಾಲೆಗಳನ್ನು ಜಿಲ್ಲಾದ್ಯಂತ ತೆರೆದಿದೆ. ಅರ್ಹ ಫಲಾನುಭವಿಗಳು ಈ ಕಾರ್ಯಕ್ರಮದ ಲಾಭ ಪಡೆಯಬೇಕು. ಆ ಮೂಲಕ ಎಲ್ಲರೂ ವಿದ್ಯಾವಂತರಾಗುವ ಸರ್ಕಾರದ ಕನಸನ್ನು ನನಸು ಮಾಡಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ಆದ್ಯತೆ

ಜಿಲ್ಲಾದ್ಯಂತ ಸ್ಥಾಪಿಸಿರುವ ಮೊರಾರ್ಜಿ ಶಾಲೆಗಳು, ಮೌಲಾನಾ ಆಜಾದ್ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೇಲ್‌ಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಇಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿಗಳಾದ ಸುಮಯಾ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮುರಳಿ ಇದ್ದರು.

PREV

Recommended Stories

ಸ್ವಾತಂತ್ರ್ಯಕ್ಕಾಗಿ 6.72 ಲಕ್ಷ ಜನ ಮರಣ
ಸಿಡಿದೆದ್ದ ಧರ್ಮಸ್ಥಳ ಭಕ್ತ ಅಭಿಮಾನಿಗಳು