ನೀರು ಸರಬರಾಜು ನೌಕರರ ಬೇಡಿಕೆ ಈಡೇರಿಸದ ಸರ್ಕಾರ

KannadaprabhaNewsNetwork |  
Published : Oct 04, 2025, 12:00 AM IST
 ಸುದ್ದಿಗೋಷ್ಟಿ | Kannada Prabha

ಸಾರಾಂಶ

ನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ನೀರು ಸರಬರಾಜು ಹೊರಗುತ್ತಿಗೆ ನೌಕರರ ಮಹಾಸಂಘದ ಅದ್ಯಕ್ಷ ಕೇಶವಮೂರ್ತಿ ಹಾಗು ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಹೇಳಿದರು.ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.ರಾಜ್ಯದಲ್ಲಿ ನಾವು ಕೇವಲ ೬ ಸಾವಿರ ನೀರು ಸರಬರಾಜುದಾರರಿದ್ದು ಬೇಲೂರು ಪುರೆಭೆಯಲ್ಲಿ ೨೯ ಹೊರಗುತ್ತಿಗೆ ನೀರು ಸರಬರಾಜುದಾರರು ಕೆಲಸ ನಿರ್ವಹಿಸುತ್ತಿದ್ದೇವೆ. ವರ್ಷಗಳಿಂದ ಗುತ್ತಿಗೆದಾರ ಪಿಎಫ್ ಹಾಗೂ ಇಎಸ್ಐಗಳನ್ನು ಕಟ್ಟಿಲ್ಲ ನಮಗೆ ಏನೇ ತೊಂದರೆಯಾದರೂ ಅದಕ್ಕೆ ನಾವೇ ಜವಬ್ದಾರರಾಗಿದ್ದೇವೆ. ಕೊರೋನಾ ಸಂದರ್ಭದಲ್ಲಿ ನಮ್ಮ ಜೀವದ ಹಂಗು ತೊರೆದು ನಾವು ಕೆಲಸ ಮಾಡಿದ್ದೇವೆ. ದಯಮಾಡಿ ಸರ್ಕಾರ ಹಾಗೂ ಜನಪ್ರತಿನಿಧಿಗಳು ‌ನಮಗೆ ಸಹಾಯ ಮಾಡುವ ಮೂಲಕ ನಮ್ಮನ್ನು ಕಾಯಂ ನೌಕರರನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದರು.ಇದೇ ಅಕ್ಟೋಬರ್ ೬ರಂದು ಸಂಪೂರ್ಣವಾಗಿ ನಮ್ಮ ಕೆಲಸವನ್ನು ನಿಲ್ಲಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ನಮ್ಮ ಸಂಘದ ಪ್ರತಿಭಟನೆಗೆ ತೆರಳುತ್ತಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದರು.ಈ ಸಂದರ್ಭದಲ್ಲಿ ಸಂಘಟನಾ ಕಾರ್ಯದರ್ಶಿ ಸುನೀಲ್, ನಿರ್ದೇಶಕ ಸಾರಸಿಂಹ ಹಾಗೂ ನರಸಿಂಹಸ್ವಾಮಿ ಹಾಜರಿದ್ದರು.

PREV

Recommended Stories

ಬೆಡ್‌ರೂಮಲ್ಲಿ ರಹಸ್ಯ ಕ್ಯಾಮೆರಾ: ಲೈಂಗಿಕಕ್ರಿಯೆ ಚಿತ್ರೀಕರಿಸಿ ದೌರ್ಜನ್ಯ
ಕಾವೇರಿ ಆರತಿ ನಿಲ್ಲಿಸಲ್ಲ: ಡಿಸಿಎಂ