ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನಕೇನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಶೂನ್ಯ ಎಂದು ಟೀಕೆ ಮಾಡುವವರು ನೆಲಮಂಗಲ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ನೋಡಬಹುದು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಬಡವರ, ಹಿಂದುಳಿದವರ ಜನತೆಯ ಬದುಕಿಗೆ ಶಕ್ತಿ ನೀಡಿವೆ ಎಂದರು.ನೆಲಮಂಗಲ ಮೀಸಲು ಕ್ಷೇತ್ರದಲ್ಲಿನ ಕಾಲೋನಿಗಳಲ್ಲಿ ಮೂಲಸೌಕರ್ಯಗಳು ಇಲ್ಲ. ಇಂದಿಗೂ ಗ್ರಾಮಕ್ಕೆ ಭೇಟಿ ನೀಡಿದಾಗ ಚರಂಡಿ, ರಸ್ತೆ, ವಿದ್ಯುತ್, ನೀರಿನ ಸಮಸ್ಯೆ ಕುರಿತು ಸ್ಥಳೀಯರು ಹೇಳುತ್ತಾರೆ. ಇವರಿಗೆ ಮಾಜಿ ಶಾಸಕ ಶ್ರೀನಿವಾಸಮೂರ್ತಿ ಮಾಡಿದ ಅನ್ಯಾಯ ನಾವು ಮಾಡುವುದಿಲ್ಲ. ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಮನಗಂಡು ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ನೆಲಮಂಗಲ ತಾಲೂಕಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಎತ್ತಿನಹೊಳೆ ಯೋಜನೆಯಡಿ ನೀರನ್ನು ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಸಿಕ್ಕರೆ ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕನಕೇನಹಳ್ಳಿ ಕಾಲೋನಿಗೆ ಭೇಟಿ ನೀಡಿ ಜನತೆಯ ಅಹವಾಲುಗಳನ್ನು ಸ್ವೀಕರಿಸಿದರು.