ಬಿಪಿಎಲ್‌ ಹೊಸ ಕಾರ್ಡ್‌ ವಿತರಿಸಲು ಸರ್ಕಾರ ತೀರ್ಮಾನ: ಶಿವಾನಂದಸ್ವಾಮಿ

KannadaprabhaNewsNetwork |  
Published : Jan 18, 2026, 01:15 AM IST
ಜಿಪಂ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಚಿಕ್ಕಮಗಳೂರುಬಿಪಿಎಲ್ ಪಡಿತರ ಚೀಟಿಯಿಂದ ವಂಚಿತರಾದ ಬಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಹೊಸದಾಗಿ ಕಾರ್ಡ್ ವಿತರಿಸಲು ತೀರ್ಮಾನಿಸಿದೆ. ಜೊತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.

-ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬಿಪಿಎಲ್ ಪಡಿತರ ಚೀಟಿಯಿಂದ ವಂಚಿತರಾದ ಬಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಹೊಸದಾಗಿ ಕಾರ್ಡ್ ವಿತರಿಸಲು ತೀರ್ಮಾನಿಸಿದೆ. ಜೊತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು

ಜಿ.ಪಂ. ಮಿನಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ 2023 ರವರೆಗೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸಾವಿರಾರು ಅರ್ಹ ಫಲಾನುಭವಿಗಳಿಗೆ ಬಿಎಪಿಎಲ್ ಕಾರ್ಡ್ ನೀಡುವ ವ್ಯವಸ್ಥೆ ಆರಂಭಗೊಂಡಿದೆ. ಸದ್ಯದಲ್ಲೇ ಸರ್ಕಾರದ ಆದೇಶದನ್ವಯ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದ್ದು ಜಿಲ್ಲೆಯ ಇನ್ನಷ್ಟು ಮಂದಿಗೆ ಗ್ಯಾರಂಟಿ ಯೋಜನೆ ಸವಲತ್ತು ಲಭಿಸಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸುಮಾರು 2.62 ಲಕ್ಷ ಕುಟುಂಬದ ಯಜಮಾನಿಯರಿಗೆ ಮಾಹೆಯಾನ ₹2 ಸಾವಿರದಂತೆ ಮಾಸಿಕ ₹52 ಕೋಟಿ ರೂ.ಗಳಂತೆ ಆರಂಭದಿಂದ ಈವರೆಗೆ ₹1214 ಕೋಟಿ ಪಾವತಿಸಿದ್ದು ಅರ್ಜಿ ಹಾಕಿದವರ ಪೈಕಿ ಕೆಲವು ಮಂದಿ ತಿದ್ದುಪಡಿ, ಆದಾಯ ತೆರಿಗೆ ಅಥವಾ ಮರಣ ಸಂಭವಿಸಿದ ಕಾರಣದಿಂದ ಸೌಲಭ್ಯ ಲಭಿಸಿಲ್ಲ. ಈ ಹೊರತಾಗಿ ಶೇ.98 ರಷ್ಟು ಪ್ರಗತಿ ಸಾಧಿಸಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಪಾಲಿಗೆ ರಾಜ್ಯ ಸರ್ಕಾರ ನೀಡಿರುವ ದೊಡ್ಡ ಶಕ್ತಿ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಖಾತೆಗೆ ಜಮಾ ಮಾಡುವುದರಿಂದ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಟ್ಟಿದೆ. ಈ ಯೋಜನೆಯು ಕುಟುಂಬದ ನಿರ್ವಹಣೆ, ಮಕ್ಕಳ ಪಾಲನೆ ಸೇರಿದಂತೆ ಉಳಿತಾಯಕ್ಕೂ ಕಾರಣವಾಗಿದೆ ಎಂದು ತಿಳಿಸಿದರು.

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯ 3.12 ಲಕ್ಷ ಆರ್.ಆರ್. ಮೀಟರ್ ಒಳಗೊಂಡಂತೆ ಸುಮಾರು 10 ಲಕ್ಷ ಜನರಿಗೆ ಸರ್ಕಾರ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿದೆ. ಹೊಸದಾಗಿ ಗೃಹಜ್ಯೋತಿ ಆಕಾಂಕ್ಷಿಗಳು ಪ್ರಸ್ತುತ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಜನಸಂಪರ್ಕ ಸಭೆಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸಲು ಮನವಿ ಮಾಡಲಾಗಿದೆ ಎಂದರು.

ಚಿಕ್ಕಮಗಳೂರು, ಕಡೂರು ಹಾಗೂ ತರೀಕೆರೆ ತಾಲೂಕಿನಲ್ಲಿ ಹೊಸದಾಗಿ ಬಸ್ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 6 ಕೋಟಿಯಷ್ಟು ಉಚಿತ ಪ್ರಯಾಣ ನಡೆಸಲಾಗಿದ್ದು, ₹ 223 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಸಾರಿಗೆ ಇಲಾಖೆಗೆ ಭರಿಸಿದೆ ಎಂದು ಹೇಳಿದರು.

ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯ ಐದು ಸಾವಿರ ನಿರುದ್ಯೋಗ ಡಿಗ್ರಿ ಮತ್ತು ಡಿಪ್ಲೋಮೋ ಪದವಿಧರರಿಗೆ ₹13 ಕೋಟಿ ರೂ.ಗಳನ್ನು ಉದ್ಯೋಗ ಲಭಿಸುವ ತನಕ ಆರ್ಥಿಕ ನೆರವಾಗಿದ್ದು ಒಟ್ಟಾರೆ ಪಂಚ ಗ್ಯಾರಂ ಟಿ ಯೋಜನೆಗಳಿಂದ ಜಿಲ್ಲೆಯ ಜನರಿಗೆ ₹2093 ಕೋಟಿಗಳನ್ನು ಏಜೆಂಟರಿಲ್ಲದೇ ನೇರ ನಗದು, ಸವಲತ್ತು ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ರಾಜಗೋಪಾಲ್, ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷ ಸಮೀವುಲ್ಲಾ ಶರೀಫ್, ಬಿ.ಜಿ.ಚಂದ್ರಮೌಳಿ, ಎನ್.ಎಸ್.ಹೇಮಾವತಿ, ವಿವಿಧ ತಾಲ್ಲೂಕು ಅಧ್ಯಕ್ಷರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 17 ಕೆಸಿಕೆಎಂ 1ಜಿಪಂ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭದ್ರೆಗೆ ಹಣ ನೀಡುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ಉದಾಸೀನ
ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ