ಧಾರವಾಡ:
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳ ವತಿಯಿಂದ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮಾ. 11 ರಿಂದ 15ರ ವರೆಗೆ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ, ತುರ್ತು ಸೇವೆ ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.
16ರಿಂದ ಗೈರು:ಎರಡನೇ ಹಂತದಲ್ಲಿ ಮಾ. 16ರಿಂದ ಬೇಡಿಕೆ ಈಡೇರುವ ವರೆಗೂ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು. ಸರ್ಕಾರಿ ಆಸ್ಪತ್ರೆಗಳಿಗೆ ಕಾಲ-ಕಾಲಕ್ಕೆ ಸಮರ್ಪಕವಾಗಿ ಔಷಧಿ ಪೂರೈಸಬೇಕು. 1973ರಿಂದ ಈ ವರೆಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡ, ಡಾ. ಪರಶುರಾಮ ಎಫ್.ಕೆ., ಚಂದ್ರಿಕಾ ದಂಬಳ್ಳಿ, ಜಿ.ವಿ. ಓಂಕಾರಗೌಡ್ರ, ಬಿ.ಆರ್. ಪಾತ್ರೋಟ್ ಇದ್ದರು.