ಕನ್ನಡಪ್ರಭ ವಾರ್ತೆ ಬೆಂಗಳೂರು
ವಾಸ್ತವವಾಗಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬುಧವಾರದಿಂದ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಮುಂದಿನ ಒಂದೆರಡು ವಾರ ಲಭ್ಯರಿಲ್ಲ. ವಿದೇಶಕ್ಕೆ ತೆರಳುವ ಮುನ್ನ ನಿಗಮ-ಮಂಡಳಿ ಅಂತಿಮಗೊಳಿಸಬೇಕು ಎಂಬ ಕಾರಣಕ್ಕೆ ಮಂಗಳವಾರ ಸಭೆ ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮಂಗಳವಾರದ ಸಭೆಯ ನಂತರ ನಿರ್ಧಾರವೊಂದು ಹೊರಬೀಳುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.
ರಾಜ್ಯ ಉಸ್ತುವಾರಿ:ಎಲ್ಲವೂ ನಿರೀಕ್ಷಿಸಿದಂತೆ ನಡೆದರೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮೊದಲೇ 39 ಮಂದಿ ನಿಗಮ-ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿಯೂ ಬಿಡುಗಡೆಯಾಗಲಿದೆ. ನಿಗಮ-ಮಂಡಳಿ ನೇಮಕ ಪಟ್ಟಿಗೆ ಒಪ್ಪಿಗೆ ಪಡೆದೇ ಬರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯಿಂದ ಆಕಾಂಕ್ಷಿಗಳಲ್ಲಿ ಮತ್ತಷ್ಟು ವಿಶ್ವಾಸ ಮೂಡಿದೆ.ಹಲವು ತಿಂಗಳಿಂದ ಕಸರತ್ತು:ನಿಗಮ-ಮಂಡಳಿ ನೇಮಕಕ್ಕೆ ಹಲವು ತಿಂಗಳುಗಳಿಂದ ಕಸರತ್ತು ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಂತಿಮ ಹಂತದ ಪರಿಶೀಲನೆ ನಡೆಸಿ ನವೆಂಬರ್ ಕೊನೆಯ ವಾರದಲ್ಲೇ ರಾಜ್ಯದಿಂದ 39 ಮಂದಿ ಶಾಸಕರ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು.ಇದೀಗ ಪಂಚರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್‌ನಿಂದ ಬುಲಾವ್ ಬಂದಿದ್ದು, ಸೋಮವಾರ ಸಂಜೆ ರಾಜ್ಯ ನಾಯಕರು ದೆಹಲಿ ಸೇರಿಕೊಂಡಿದ್ದಾರೆ. ಇವರ ಜತೆ ಕೆಲ ಸಚಿವರೂ ಇದ್ದಾರೆ.