ಸರ್ಕಾರದ ಹಸ್ತಕ್ಷೇಪದಿಂದ ಸಹಕಾರಿ ಧೋರಣೆಗೇ ಹಿನ್ನಡೆ: ರಾಘವೇಂದ್ರ ನಾಯಕ್

KannadaprabhaNewsNetwork |  
Published : Sep 10, 2025, 01:03 AM IST
ತೀರ್ಥಹಳ್ಳಿ ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರನೀಡಿ ಗೌರವಿಸಲಾಯಿತು. | Kannada Prabha

ಸಾರಾಂಶ

ಸೌಹಾರ್ದ ಸಹಕಾರಿ ವ್ಯವಸ್ಥೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕಿದೆ. ಸೌಹಾರ್ದ ಸಹಕಾರಿ ಸಂಘಟನೆಗೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರದ ಬಗ್ಗೆ ಸಹಕಾರಿಗಳು ಒಗ್ಗಟ್ಟಾಗಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಸುವ ಅನಿವಾರ್ಯತೆ ಇದೆ ಎಂದು ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.

ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ

ಸೌಹಾರ್ದ ಸಹಕಾರಿ ವ್ಯವಸ್ಥೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕಿದೆ. ಸೌಹಾರ್ದ ಸಹಕಾರಿ ಸಂಘಟನೆಗೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರದ ಬಗ್ಗೆ ಸಹಕಾರಿಗಳು ಒಗ್ಗಟ್ಟಾಗಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಸುವ ಅನಿವಾರ್ಯತೆ ಇದೆ ಎಂದು ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.

ಪಟ್ಟಣದ ವಿಧ್ಯಾಧಿರಾಜ ಸಭಾ ಭವನದಲ್ಲಿ ಮಂಗಳವಾರ ನಡೆದ ಸರಸ್ವತಿ ಸೌಹಾರ್ದ ಸಹಕಾರಿಯ 16 ನೇ ವರ್ಷದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯದಂತೆ ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಸೌಹಾರ್ದ ಸಹಕಾರಿ ವ್ಯವಸ್ಥೆಯಲ್ಲಿ ಸರ್ಕಾರದ ಹಸ್ತಕ್ಷೇಪದಿಂದ ಸಹಕಾರಿ ಧೋರಣೆಗೇ ತೀವ್ರ ಹಿನ್ನಡೆ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸುಮಾರು ಆರು ಸಾವಿರಕ್ಕೂ ಹೆಚ್ಚಿನ ಸೌಹಾರ್ದ ಸಹಕಾರಿ ಸಂಘಗಳಲ್ಲಿ ಬಹುತೇಕ ಸಂಘಗಳು ಸಾಮಾಜಿಕ ಬದ್ದತೆಯನ್ನೂ ಹೊಂದಿದ್ದು, ಪಾರದರ್ಶಕವಾಗಿಯೂ ಕಾರ್ಯ ನಿರ್ವಹಿಸುತ್ತಿವೆ. ಅತ್ಯಂತ ಶಿಸ್ತಿನಿಂದ ವ್ಯವಹಾರ ನಡೆಸುವ ಮೂಲಕ ಷೇರುದಾರರ ಹಿತಕ್ಕೆ ಪೂರಕವಾಗಿರುವುದನ್ನು ಸರ್ಕಾರ ಗಮನಿಸಬೇಕಿದೆ. ಸರಸ್ವತಿ ಸೌಹಾರ್ದ ಸಹಕಾರಿ ಸಂಘ ಅತ್ಯಂತ ಸುಭದ್ರವಾಗಿದ್ದು ಷೇರುದಾರರಿಗೆ ಈ ವರ್ಷ 15% ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದರು.

ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಸಹಕಾರಿ ಕೆ.ನಾಗರಾಜ ಶೆಟ್ಟಿ ಮಾತನಾಡಿ, ಸೌಹಾರ್ದ ಸಹಕಾರಿ ಕ್ಷೇತ್ರದ ಮೇಲೆ ತನ್ನ ಹಿಡಿತ ಸಾಧಿಸಲು ಮುಂದಾಗಿರುವ ಸರ್ಕಾರ ಈ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯದಂತೆ ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಸೌಹಾರ್ದ ಸಹಕಾರಿ ವ್ಯವಸ್ಥೆಯ ಕತ್ತು ಹಿಸುಕುವಂತಾಗಿದೆ. ಈ ಬಗ್ಗೆ ಸಹಕಾರಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಚಿಂತನೆ ನಡೆಸುವಂತಾಗಿದೆ ಎಂದು ಹೇಳಿದರು.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ನಿರ್ದೆಶಕರುಗಳಾದ ಸಂದೇಶ್ ಜವಳಿ, ರಮೇಶ್ ನಾಯಕ್, ಪ್ರಶಾಂತ್,ಕಿರಣ್ ಶೆಣೈ, ನಾಗರಾಜ್ ಕುಕ್ಕೆ, ರಾಜೇಶ್ ಶಿರವಂತೆ,ಶುಭದಾ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಚ್ಯುತ್ ನಾಯಕ್ ಇದ್ದರು.

PREV

Recommended Stories

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ