ಚಿಕ್ಕಮಗಳೂರುಬಡವರ, ಮಹಿಳೆಯರ ಮತ್ತು ಶೋಷಿತ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸದುಪಯೋಗದಿಂದ ಬದುಕು ಹಸನು ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬಡವರ, ಮಹಿಳೆಯರ ಮತ್ತು ಶೋಷಿತ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸದುಪಯೋಗದಿಂದ ಬದುಕು ಹಸನು ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ವಿಶೇಷ ಯೋಜನೆಯಡಿ ಆಯ್ಕೆಯಾದ 21 ಮಹಿಳಾ ಫಲಾನುಭವಿ ಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಅವರು,
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ಈ ಹೊಲಿಗೆ ಯಂತ್ರ ವಿತರಿಸಲಾಗುತ್ತಿದೆ. ಇದನ್ನು ಕೇವಲ ವಸ್ತುವಾಗಿ ನೋಡದೆ, ಕುಟುಂಬದ ಆದಾಯದ ಮೂಲ ಮಾಡಿಕೊಳ್ಳಬೇಕು. ಆ ಮೂಲಕ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ನೀಡಲು ಮುಂದಾಗಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡವರ ಬದುಕಿಗೆ ಆಸರೆ ಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ₹2 ಸಾವಿರ ಜಮೆಯಾಗುತ್ತಿದೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಹಸಿವು ಮುಕ್ತ ಸಮಾಜದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಬಣ್ಣಿಸಿದರು.ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಶಿಕ್ಷಣವೇ ಪ್ರಗತಿ ಮೂಲ ಮಂತ್ರ. ಯಾರೇ ಆಗಲಿ ಉತ್ತಮ ಶಿಕ್ಷಣ ಪಡೆದರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ. ತಾಯಿಯೇ ಮೊದಲ ಗುರು ಎಂಬ ಮಾತಿನಂತೆ, ನಿಮ್ಮ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸಿ ಸತ್ಪ್ರಜೆಗಳನ್ನಾಗಿ ರೂಪಿಸಿ ಎಂದು ಶಾಸಕರು ಮನವಿ ಮಾಡಿದರು.ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಬಗರ್ ಹುಕುಂ ಸಮಿತಿ ಸದಸ್ಯರಾದ ಕೆಂಗೆಗೌಡ, ಶಂಕರ್ ನಾಯಕ್ ಸೇರಿದಂತೆ ನಿಗಮದ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.