ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಆರ್.ಬಸನಗೌಡ ತುರ್ವಿಹಾಳ

KannadaprabhaNewsNetwork |  
Published : Nov 02, 2024, 01:22 AM ISTUpdated : Nov 02, 2024, 01:23 AM IST
01ಕೆಪಿಎಸ್ಎಂಕೆ01 | Kannada Prabha

ಸಾರಾಂಶ

ಮಸ್ಕಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕನ್ನಡ ಬಾವುಟ ಹಿಡಿದು ಕುಣಿದು ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಕನ್ನಡ ನಾಡಿನ ನೆಲ, ಜಲ, ಭಾಷೆ ಜೊತೆಗೆ ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರುವಿಹಾಳ ಹೇಳಿದರು.

ಮಸ್ಕಿ ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪುರಸಭೆ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯವನ್ನು ಸರ್ಕಾರ ಮಾಡಿದೆ,ಪಟ್ಟಣದ ಅಶೋಕ ಶಿಲಾ ಶಾಸನ ಅಭಿವೃದ್ಧಿಗಾಗಿ 10 ಕೋಟ ಅನುದಾನವನ್ನು ನೀಡುವ ಮೂಲಕ ಸರ್ಕಾರ ಶಾಸನದ ಸ್ಥಳದ ಅಭಿವೃದ್ಧಿಗೆ ಮುಂದಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ ಡಾ.ಮಲ್ಲಪ್ಪ ಯರಗೋಳ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸತ್ಕರಿಸಲಾಯಿತು.

ವಿವಿಧೆಡೆ ಆಚರಣೆ:ಮಸ್ಕಿ ಪಟ್ಟಣದ ವಿವಿಧೆಡೆ ಕನ್ನಡಪರ ಸಂಘಟನೆಗಳ ಕರವೇ ಅಧ್ಯಕ್ಷರಾದ ದುರ್ಗರಾಜ ವಟಗಲ್, ಆರ್ ಕೆ ನಾಯಕ್, ಬಸವರಾಜ ಉದ್ಬಾಳ್, ಪೀರ್ ಸಾಬ್, ರಾಘವೇಂದ್ರ ಗುತ್ತೇದಾರ, ಕಿರಣ್ ಮುರಾರಿ, ಮೌನೇಶ್ ಹಸಮಕಲ್ ಕನ್ನಡ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ವಿವಿಧ ಮುಖಂಡರು ಭಾಗವಹಿಸಿದ್ದರು.

ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ತಾಪಂ ಇಒ ಅಮರೇಶ ಯಾದವ್, ಸಿಪಿಐ ಬಾಲಚಂದ್ರ ಲಕ್ಕಂ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಭುವನೇಶ್ವರಿ ಭಾವಚಿತ್ರ ಮೆರವಣಿಗೆ:

ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪುರಸಭೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ಶಾಸಕ ಆರ್ ಬಸನಗೌಡ ತುರುವಿಹಾಳ ಹಾಗೂ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ 100 ಮೀಟರ್ ಉದ್ದದ ಕನ್ನಡ ಬಾವುಟವನ್ನು ಹಿಡಿದುಕೊಂಡು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ಜನರ ಗಮನ ಸೆಳೆದರು.

ಕನ್ನಡ ಹಾಡಿಗೆ ಬಾವುಟ ಹಿಡಿದು ಕುಣಿದ ಶಾಸಕ

ತಾಯಿ ಭುವನೇಶ್ವರಿಯ ಭಾವಚಿತ್ರ ಮೆರವಣಿಗೆ ಸಂದರ್ಭದಲ್ಲಿ ಹಳೇ ಬಸ್ ನಿಲ್ದಾಣ ಅಶೋಕ ವೃತ್ತದಲ್ಲಿ ಶಾಸಕ ಆರ್.ಬಸನಗೌಡ ತುರುವಿಹಾಳ ಕನ್ನಡದ ಹಾಡಿಗೆ ಕನ್ನಡದ ಬಾವುಟ ಹಿಡಿದುಕೊಂಡು ಕುಣಿದು ಕುಪ್ಪಳಿಸಿದರು. ಜೊತೆಗೆ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಸೇರಿ ಕನ್ನಡಪರ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಹಾಗೂ ಕನ್ನಡ ಅಭಿಮಾನಿಗಳು ಕನ್ನಡದ ಹಾಡಿಗೆ ಕುಣಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ