ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ಈಗ ನ್ಯಾಯಾಲಯದ ಮುಂದಿದ್ದು, ಸಮಸ್ಯೆ ಬಗೆಹರಿಯದೆ ಉಳಿದಿರುವುದಕ್ಕೆ ಹಿಂದಿನ ಸರ್ಕಾರ ಮಾಡಿದ ತಪ್ಪುಗಳೂ ಇವೆ. ಅವುಗಳನ್ನು ನಾವೀಗ ಸರಿಪಡಿಸಿಕೊಂಡು ಮುಂದಿನ ಹೆಜ್ಜೆ ಇಡಬೇಕಿದೆ ಎಂದು ಹೇಳಿದರು.
ನ್ಯಾಯಾಲಯದಲ್ಲಿ ಈ ಕುರಿತು ಹೋರಾಟ ನಡೆಸಲು ಈಗಾಗಲೇ ರಾಜ್ಯ ಸರ್ಕಾರವು ಹಿರಿಯ ವಕೀಲರನ್ನು ನೇಮಿಸಿದೆ. ಅದರ ಜತೆಗೆ ಹಿಂದಿನ ಸರ್ಕಾರ ಮಾಡಿದ ತಪ್ಪುಗಳನ್ನು ನಾವು ಸರಿಪಡಿಸಿಕೊಂಡೆ ನ್ಯಾಯಾಲಯದಲ್ಲಿ ಹೋರಾಟ ನಡೆಸಬೇಕಿರುವ ಕಾರಣಕ್ಕೆ ನಮ್ಮ ಸರ್ಕಾರ ಬಂದ ಕ್ಷಣದಿಂದಲೂ ಆ ನಿಟ್ಟಿನ ಪ್ರಯತ್ನ ನಿರಂತರವಾಗಿ ನಡೆದಿದೆ ಎಂದು ತಿಳಿಸಿದರು.ಟೀಕೆ ಟಿಪ್ಪಣಿಗಳು ಏನೇ ಇದ್ದರೂ ನಾವು ಯಾವುದನ್ನು ಮರೆತಿಲ್ಲ. ನಾನು ಕೂಡ ಬಗರ್ ಹುಕುಂ ರೈತರ ಪರವಾಗಿ ಹೋರಾಟ ಮಾಡಿದವನು. ಅಷ್ಟು ಮಾತ್ರವಲ್ಲ ಬಗರ್ ಹುಕುಂ ರೈತರ ಸಮಾವೇಶಕ್ಕೆ ಪಕ್ಷದ ನಾಯಕರನ್ನು ಆಹ್ವಾನಿಸಿದ್ದೆ. ಆ ನಿಟ್ಟಿನಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ ಕ್ಷಣದಿಂದ ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ವಿಚಾರವಾಗಿ ಅನೇಕ ಸಭೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.
ಹಿಂದೆ ಆದ ತಪ್ಪುಗಳನ್ನು ಸರಿಪಡಿಸಿಕೊಂಡು ಕಾನೂನು ಹೋರಾಟ ನಡೆಸಬೇಕಿದೆ. ಅದಕ್ಕೆ ಕೇಂದ್ರ ಸರ್ಕಾರದ ನೆರವು ಕೂಡ ಬೇಕಿದೆ. ಅದಕ್ಕೂ ಮುಂಚೆ ನಮ್ಮ ಸರ್ಕಾರದ ನಿಲುವು, ನಿರ್ಧಾರಗಳನ್ನು ಮುಂಬರುವ ಚಳಿಗಾಲದ ಅಧಿವೇಶನದೊಳಗೆ ಸಿಎಂ ಸಿದ್ದರಾಮಯ್ಯ ನವರು ಪ್ರಕಟಿಲಿದ್ದಾರೆ.
ತೆರವು ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ನೋಟಿಸ್ ನೀಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಯಾವ ರೈತರಿಗೆ ನೋಟೀಸ್ ಕೊಟ್ಟರು ನಾವು ಜವಬ್ದಾರಿ ಆಗುತ್ತೇವೆ. ನೋಟೀಸ್ ಕೊಡುವುದು ಕಡಿಮೆಯಾಗಿದೆ. ಭೂಮಿ ಕಳೆದುಕೊಳ್ಳುವವರಿಗೆ ನ್ಯಾಯ ಕೊಡಿಸುತ್ತೇವೆ. ವಾರದಲ್ಲಿ 6 ದಿನ ಶಾಲೆಗಳಲ್ಲಿ ಮೊಟ್ಟೆಗಳ ವಿತರಣೆಯಲ್ಲಿ ಶಿಕ್ಷಕರಿಗೆ ಒತ್ತಡ ಹೆಚ್ಚುತ್ತಿದ್ದು, ಶೈಕ್ಷಣಿಕ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದೆ ಎಂಬ ಆರೋಪಗಳು ಬರುತ್ತಿದ್ದು, ಇದನ್ನು ಬಗೆಹರಿಸಲು ಸ್ಥಳೀಯ ಗ್ರಾಪಂ ವ್ಯಾಪ್ತಿಯಲ್ಲಿ ಗೌರವಧನದ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಚಿಂತನೆ ನಡೆದಿದೆ ಎಂದರು.