ಹಾವೇರಿ: ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರ್ಕಾರದ ಸಚಿವ ಸಂಪುಟ ಉಪಸಮಿತಿಯ ತೀರ್ಮಾನವನ್ನು ರದ್ದುಪಡಿಸಿ ಯಥಾಸ್ಥಿತಿಯಲ್ಲಿ ವಿಶ್ವವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಉಪಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಎಂ. ಲಮಾಣಿ ಅವರಿಗೆ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿ, ಯಾವುದೇ ಅನುದಾನ ಬರದಿರುವ ಸಂದರ್ಭದಲ್ಲಿಯೂ ವಿಶ್ವವಿದ್ಯಾಲಯವು ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಗತ್ಯ ಅನುದಾನ ನೀಡಿ ಬಲಪಡಿಸುವ ಬದಲು ವಿಶ್ವವಿದ್ಯಾಲಯವನ್ನು ಮುಚ್ಚುವುದು ಸರಿಯಲ್ಲ. ಹಾಗಾಗಿ ರಾಜ್ಯ ಸರ್ಕಾರ ಈ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಿ, ವಿವಿ ಅಭಿವೃದ್ಧಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಹಾವೇರಿ ವಿಶ್ವವಿದ್ಯಾಲಯ ಇರುವುದರಿಂದ ಜಿಲ್ಲೆಗೂ ಅನುಕೂಲ ಆಗುತ್ತದೆ. ಹಾವೇರಿ ವಿವಿ ಉಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ಹೋರಾಟ ಸಮಿತಿ ಸದಸ್ಯರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸದಸ್ಯರಾದ ಪರಿಮಳ ಜೈನ, ಸತೀಶ ಕುಲಕರ್ಣಿ, ಸತೀಶ ಎಂ.ಬಿ., ಬಸವರಾಜ ಎಸ್., ಬಸವರಾಜ ಪೂಜಾರ, ಮಲ್ಲಿಕಾರ್ಜುನ ಹಿರೇಮಠ, ಬಸವರಾಜ ಹೆಡಿಗೊಂಡ, ಶ್ರೀಧರ ದೊಡಮನಿ ಇತರರು ಉಪಸ್ಥಿತರಿದ್ದರು.ಹಾವೇರಿ ವಿವಿ ಮುಚ್ಚುವ ನಿರ್ಧಾರ ಕೈಬಿಡಿಹಾನಗಲ್ಲ: ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿರುವ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಬೇಕೆನ್ನುವ ಸಚಿವ ಸಂಪುಟದ ಉಪಸಮಿತಿಯ ತೀರ್ಮಾನ ರದ್ದುಪಡಿಸಿ ವಿಶ್ವವಿದ್ಯಾಲಯ ಉಳಿಸಿ, ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಸದಸ್ಯರು ಶಾಸಕ ಶ್ರೀನಿವಾಸ ಮಾನೆ ಅವರನ್ನು ತಾಲೂಕಿನ ಅರೆಲಕ್ಮಾಪುರ ಗ್ರಾಮದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಹೋರಾಟ ಸಮಿತಿಯ ಸದಸ್ಯರಾದ ಬಸವರಾಜ ಪೂಜಾರ, ಸತೀಶ ಕುಲಕರ್ಣಿ, ಪರಿಮಳಾ ಜೈನ, ಸತೀಶ ಎಂ.ಬಿ., ರೇಣುಕಾ ಗುಡಿಮನಿ, ಜುಬೇದಾ ನಾಯಕ, ಬಸವರಾಜ ಎಸ್., ಉಡುಚಪ್ಪ ಮಾಳಗಿ, ಎಂ. ಆಂಜನೇಯ ಉಪಸ್ಥಿತರಿದ್ದರು.