ಸಂವಿಧಾನ ಜಾರಿಯಾದ ಫಲವೇ ಪ್ರಜೆಗಳ ಸರ್ಕಾರ

KannadaprabhaNewsNetwork |  
Published : Jan 27, 2024, 01:18 AM IST
ಫೋಟೊ:೨೬ಕೆಪಿಸೊರಬ-೦೨ : ಸೊರಬ ಪಟ್ಟಣದ ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಸೊರಬದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸೊರಬ

ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು. ಪಟ್ಟಣದ ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ. ಈ ಮೂಲಕ ಶಿಕ್ಷಣ, ಕೃಷಿ, ವೈಜ್ಞಾನಿಕ, ಕೈಗಾರಿಕಾ ಕ್ಷೇತ್ರಗಳು ಅಭಿವೃದ್ಧಿ ಹೊಂದಿದವು. ಎಲ್ಲ ಧಾರ್ಮಿಕ ಹಬ್ಬಗಳಂತೆ ರಾಷ್ಟ್ರೀಯ ಹಬ್ಬಗಳು ಎಲ್ಲರ ಮನೆ- ಮನಗಳಲ್ಲಿ ಆಚರಿಸುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭ ಪೌರಕಾರ್ಮಿಕ ಎನ್.ಪ್ರಶಾಂತ್, ಬಿಳವಾಣಿ ವೀರಭದ್ರೇಶ್ವರ ಗ್ರಾಮಾಂತರ ಪ್ರೌಢಶಾಲೆ ವಿದ್ಯಾರ್ಥಿ ಮಮತಾ ಶಿವಪುರ, ಜೆಸಿಐನ ಪ್ರಶಾಂತ ದೊಡ್ಡಮನೆ, ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಶಿಕ್ಷಕ ಕೆ.ಬಿ. ಪುಟ್ಟರಾಜು, ತಹಸೀಲ್ದಾರ್ ಹುಸೇನ್ ಸರಕಾವಸ್, ಬಿಇಒ ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು. ಅನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಿವಾನಂದ ಪಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ, ತಾಲೂಕು ಪಂಚಾಯಿತಿ ಇಒ ಡಾ. ಪ್ರದೀಪ್‌ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ್ ಒಡೆಯರ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರ, ಪುರಸಭಾ ಸದಸ್ಯರಾದ ಎಂ.ಡಿ. ಉಮೇಶ್, ಶ್ರೀರಂಜನಿ, ಮಧುರಾಯ್ ಜಿ. ಶೇಟ್, ವೀರೇಶ್ ಮೇಸ್ತ್ರಿ, ಅನ್ಸರ್ ಅಹ್ಮದ್, ನಟರಾಜ್ ಉಪ್ಪಿನ, ಪ್ರೇಮಾ, ಸುಲ್ತಾನ ಬೇಗಂ, ಆಫ್ರಿನ್, ದೈಹಿಕ ಶಿಕ್ಷಕ ಈಶ್ವರಪ್ಪ, ವಿನೋದ್, ಸಿಆರ್‌ಪಿಗಳಾದ ಸುಧಾ, ಹರೀಶ್ ಇತರರಿದ್ದರು.

- - - -26ಕೆಪಿಸೊರಬ02:

ಸೊರಬ ಪಟ್ಟಣದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ, ಸನ್ಮಾನಿಸಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ