ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್ ನಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆ ಕಾಯಂ ಪೌರ ಕಾರ್ಮಿಕರಿಗೆ ಅಂದಾಜು 1.95 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದರು.ಪ್ರಸ್ತುತ 16 ಮನೆಗಳನ್ನು ಪೂರ್ಣಗೊಳಿಸಿ ವಾಸಕ್ಕೆ ನೀಡಲಾಗಿದೆ. ಉಳಿದ 7 ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು ಎಂದರು.
ಪಟ್ಟಣ ವ್ಯಾಪ್ತಿಯ ತಮಿಳು ಕಾಲೋನಿ ನಿವಾಸಿಗಳನ್ನು ಸ್ಥಳಾಂತರ ಮಾಡಿ ಅವರಿಗೆ ಮೂಲ ಸೌಕರ್ಯಗಳೊಂದಿಗೆ ಚಿಂತನೆ ನಡೆಸಿದ್ದೇನೆ. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳೊಂದಿಗೆ ರೂಪುರೇಷಗಳ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಈ ವೇಳೆ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ, ಇಇ ಆರ್.ಪ್ರತಾಪ್, ಎಇಇ ರಾಘವೇಂದ್ರ, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಸಚ್ಚಿನ್, ಸುರೇಶ್ ಕುಮಾರ್, ಸುಮಿತ್ರಾ ರಮೇಶ್, ಸರ್ವಮಂಗಳ, ಕಮಲ್ ನಾಥ್, ಸಿದ್ದಮರಿ ಶಾಂತಮ್ಮ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್ ಮತ್ತಿತರರು ಇದ್ದರು.