ದಾಬಸ್‌ಪೇಟೆ: ಕನ್ನಡ ಸುವರ್ಣ ಸಂಭ್ರಮಾಚರಣೆ ನೆನಪಿಗಾಗಿ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸೇವೆ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ನಿಲ್ಲಿಸಲು ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
128.98 ಕೋಟಿ ಮೌಲ್ಯದ ಮಾದಕ ವಸ್ತುಗಳ ವಶ:
ಕಳೆದ 3 ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಅತ್ಯಂತ ಹೆಚ್ಚು ಪ್ರಕರಣ ದಾಖಲಿಸಿಕೊಂಡಿದ್ದು, 2023ರಲ್ಲಿ 6764 ಪ್ರಕರಣಗಳನ್ನು ದಾಖಲಿಸಿ 9645 ಕೆಜಿ ಗಾಂಜಾ, 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡು 7297 ಭಾರತೀಯರು, 106 ವಿದೇಶೀಯರು ಸೇರಿದಂತೆ ಒಟ್ಟು 7403 ಜನ ಆರೋಪಿಗಳನ್ನು ಬಂಧಿಸಿ ಅವರಿಂದ 128.98 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದರು.36.65 ಕೋಟಿ ಮೌಲ್ಯದ ಮಾದಕ ವಸ್ತು ನಾಶ:
ಇಡೀ ಮನುಕುಲಕ್ಕೆ ಡ್ರಗ್ಸ್ ಎಂಬ ಮಾರಿ ಸವಾಲಾಗಿದೆ, ಯುವಕರನ್ನು ಅತೀ ಹೆಚ್ಚು ದಾರಿತಪ್ಪಿಸುತ್ತಿರುವುದು ಮಾದಕ ವಸ್ತುಗಳು, ಸಣ್ಣ ರಾಷ್ಟ್ರಗಳು ಮಾದಕ ವಸ್ತು ಬಗ್ಗೆ ಅಸಡ್ಡೆ ಭಾವನೆ, ಮನುಕುಲಕ್ಕೆ ಮಾದಕ ವಸ್ತು ವ್ಯಾಪಿಸುವಂತೆ ಆಗಿದೆ. ಡ್ರಗ್ಸ್ ಮುಕ್ತ ಜಿಲ್ಲೆಯ ನಿರ್ಮಾಣ ಜವಾಬ್ದಾರಿಯನ್ನು ಆಯಾ ಎಸ್.ಪಿ.ಗೆ ವಹಿಸಿದ್ದೇವೆ ಎಂದರು.
ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ನಿಯಂತ್ರಣಕ್ಕೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಪ್ರತಿ ಪೊಲೀಸ್ ಸಿಬ್ಬಂದಿಯೂ ಕಾರ್ಯಾಚರಣೆ ಮಾಡಿ ಹತೋಟಿಯಲ್ಲಿಡಲು ಶ್ರಮಿಸುತ್ತಿರುವ ರಾಜ್ಯ ಪೊಲೀಸರು ಮತ್ತು ರೈಲ್ವೇ ಪೊಲೀಸರ ಕಾರ್ಯಕ್ಕೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಂಶಿಸುತ್ತೇನೆ ಎಂದು ಹೇಳಿದರು.
ಮಾದಕ ವಸ್ತುಗಳನ್ನು ನಿಯಂತ್ರಿಸಲು ಹಾಗೂ ಪತ್ತೆ ಹಚ್ಚಲು ರಾಜ್ಯ ಪೊಲೀಸರಿಗೆ ಹೆಚ್ಚಿನ ತರಭೇತಿ ನೀಡಲಾಗುವುದು, ಹೊಸ ಹೊಸ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತದೆ ಹಾಗೂ ಪೊಲೀಸರಿಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುವ, ವ್ಯಸನಿಗಳಿಗೆ ನೀಡುವ ಗಾಂಜಾ ಪ್ಲೇಡರ್ ಗಳ ಅಸ್ತಿಮುಟ್ಟಗೋಲು ಸೇರಿದಂತೆ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಚಿಂತನೆ ಮಾಡಲಾಗುತ್ತಿದೆ ಎಂದರು.
ಪೋಟೋ 1 :
ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸುತ್ತಿರುವುದು.ಪೋಟೋ 3 :